Site icon Ullalavani

ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು : ವಿದ್ಯಾರ್ಥಿ ಸಂಘದ ಉದ್ಘಾಟನೆ

ಮಂಗಳೂರು : ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮಿಲಾಗ್ರಿಸ್ ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ನೆರವೇರಿತು.


ಮಿಲಾಗ್ರಿಸ್ ವಿದ್ಯಾ ಸಂಸ್ಥೆಯ ಸಂಚಾಲಕರು ವಂದನೀಯ ಗುರು ಬೊನವೆಂಚರ್ ನಜರೆತ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ವೃಧ್ದಿಸಿಕೊಳ್ಳುವುದು. ನಾಯಕನಾದವನು ಶಿಸ್ತುಬದ್ಧತೆ, ಸಮಯದ ಪಾಲನೆ ಉತ್ತಮ ನಡೆ ನುಡಿ ಹೊಂದಿ ಇತರರಿಗೆ ಮಾದರಿಯಾಗಬೇಕೆಂದು ಹೇಳಿದರು.
ಮುಖ್ಯ ಅತಿಥಿಯಾದ ಮಿಲಾಗ್ರಿಸ್ ಪದವಿ ಕಾಲೇಜಿನ ಪ್ರ‍್ರಾಂಶುಪಾಲರಾದ ವಂದನೀಯ ಗುರು ಮೈಕಲ್ ಸಾಂತುಮಾಯರ್ ಹಾಗೂ ಸಿಲ್ವೆಸ್ಟರ್ ಮಸ್ಕರೇನಸ್, ಉಪಾಧ್ಯಕ್ಷರು, ಪ್ಯಾರಿಷ್ ಪಾಸ್ಟೋರಲ್ ಕೌನ್ಸಿಲ್ ಮಿಲಾಗ್ರಿಸ್ ಚರ್ಚ್ ನಲ್ಲಿ ಉಪಸ್ಥಿತರಿದ್ದರು.
ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಮೇಲ್ವಿನ್ ವಾಸ್‌ವರು ನೂತನ ವಿದ್ಯಾರ್ಥಿ ಸಂಘದ ನಾಯಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಶ್ರೀಮತಿ ಜ್ಯೋತಿ ರತ್ನ ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಪುಲ್ ಶೆಟ್ಟಿ ವಂದಿಸಿದರು. ಶ್ರೀಮತಿ ಶೆರೆಲ್ ಡಿಸೋಜ ನಿರೂಪಿಸಿದರು. ಈ ಕಾರ್ಯಕ್ರಮ ಕಾಲೇಜು ಗೀತೆಯೊಂದಿಗೆ ಮುಕ್ತಾಯಗೊಂಡಿತು.

Exit mobile version