ಕುಂಪಲ : ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದ ಶ್ರೀ ದುರ್ಗಾಪರಮೇಶ್ವರ ಮಹಿಳಾ ಸೇವಾ ಸಮಿತಿಯ ಆಶ್ರಯದಲ್ಲಿ ನಡೆಯುವ ಶ್ರೀ ವರ ಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ಕ್ಷೇತ್ರದಲ್ಲಿ ನಡೆಯಿತು. ಕ್ಷೇತ್ರದಲ್ಲಿ ಜರಗಿದ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದ ಬಳಿಕ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಸೇವಾ ಸಮಿತಿ, ಮಹಿಳಾ ಸೇವಾ ಸಮಿತಿಯ ಸದಸ್ಯೆಯರು ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.
