Site icon Ullalavani

ಜು.23 ರಿಂದ ಜು.26 ರವರೆಗೆ ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆ ನಡೆಸದಂತೆ ಹವಮಾನ ಇಲಾಖೆ ಎಚ್ಚರಿಕೆ

ಮಂಗಳೂರು : ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಶಾಖೆಯ ಮುನ್ಸೂಚನೆಯಂತೆ ಜುಲೈ 23ರಿಂದ ಜುಲೈ 26ರ ವರೆಗೆ ಅರಬ್ಬಿ ಸಮುದ್ರದಲ್ಲಿ ಭಾರೀ ಮಳೆ ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಸಮುದ್ರ ಪ್ರಕ್ಷುಬ್ಧವಾಗಿರುವ ಹಿನ್ನೆಲೆಯಲ್ಲಿ ಮೀನುಗಾರಿಕೆ ನಡೆಸುವುದು ಅಪಾಯಕಾರಿಯಾಗಿದೆ ಎಂದು ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆಯಂತೆ ಮಂಗಳೂರಿನ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.

ಅನಾಹುತಗಳನ್ನು ತಪ್ಪಿಸಲು ಮತ್ತು ಜೀವಭದ್ರತೆಗೆ ಪ್ರಾಮುಖ್ಯತೆ ನೀಡುವ ನಿಟ್ಟಿನಲ್ಲಿ, ನಾಡದೋಣಿ ಮೀನುಗಾರರು ಸೇರಿದಂತೆ ಎಲ್ಲ ಮೀನುಗಾರರೂ ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳಬಾರದು ಎಂಬಂತೆ ಮುನ್ನೆಚ್ಚರಿಕೆ ಸೂಚನೆ ನೀಡಲಾಗಿದೆ.

ಈ ಕುರಿತಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು, ಮಂಗಳೂರು ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದು, ಎಲ್ಲ ಮೀನುಗಾರರು ಮತ್ತು ಸಂಬಂಧಿತ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Exit mobile version