
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕೃಷ್ಣಾಪುರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರವನ್ನು ಯುವಕ ಮಂಡಲ (ರಿ.), ಯುವತಿ ಮಂಡಲ (ರಿ.) ವನಿತಾ ಸೇವಾ ಸಮಾಜ (ರಿ.), ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.) ಕೃಷ್ಣಾಪುರ-ಕಾಟಿಪಳ್ಳ ಇವರುಗಳ ಜಂಟಿ ಸಹಯೋಗದೊಂದಿಗೆ ದಿನಾಂಕ ೨೭.೦೭.೨೦೨೫ನೇ ಆದಿತ್ಯವಾರ ಪೂರ್ವಾಹ್ನ ಸಮಯ ೯.೩೦ ರಿಂದ ಅಪರಾಹ್ನ ೧೨.೩೦ರ ವರೆಗೆ ಯುವಕ ಮಂಡಲ (ರಿ.) ೫ನೇ ವಿಭಾಗ, ಕೃಷ್ಣಾಪುರ ಇಲ್ಲಿ ಆಯೋಜಿಸಲಾಗಿದೆ.
ವೈದ್ಯಕೀಯ ಶಿಬಿರದಲ್ಲಿ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಪೌಂಡೇಷನ್, ಕದ್ರಿ, ಮಂಗಳೂರು, ಇವರ ನುರಿತ ವೈದ್ಯರ ತಂಡದಿAದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತç ಚಿಕಿತ್ಸೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಹಾಗೂ ಇನ್ನಿತರ ವೈದ್ಯಕೀಯ ಸೇವೆಗಳು ಲಭ್ಯವಿದೆ. ಅಗತ್ಯವುಳ್ಳವರಿಗೆ ಸಂಘದ ವತಿಯಿಂದ ಉಚಿತ ಕನ್ನಡಕ ವಿತರಣೆಯನ್ನು ಮಾಡಲಾಗುವುದು.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

