ಚಾಮರಾಜನಗರ : ನಟ ಸಾರ್ವಭೌಮ ಡಾ.ರಾಜ್‌ಕುಮಾರ್ ಅವರ ಸಹೋದರಿ ನಾಗಮ್ಮ ಅವರು ಆ.1 ರಂದು ವಿಧಿವಶರಾಗಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗಾಜನೂರಿನ ಸ್ವಗ್ರಹದಲ್ಲಿ ವಾಸಿಸುತ್ತಿದ್ದ ನಾಗಮ್ಮ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ರಾಜ್‌ಕುಮಾರ್ ತಲೆಮಾರಿನ ಕೊನೆಯ ಹಿರಿಯ ಸದಸ್ಯೆಯಾಗಿದ್ದ ಇವರು ತಮ್ಮ 92ನೇ ವಯಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.



