ಉಳ್ಳಾಲ: ಇಲ್ಲಿನ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಷನ್ ಉಳ್ಳಾಲ ವಲಯ ಜಂಟಿಯಾಗಿ ಉಳ್ಳಾಲದ ಅಬ್ಬಕ್ಕ ಸರ್ಕಲ್‌ನಲ್ಲಿರುವ ಅಬ್ಬಕ್ಕ ಪ್ರತಿಮೆ ಬಳಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುವುದು.



ಈ ಸಂದರ್ಭದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಮಾಜಿ ಶಾಸಕರಾದ ಹಾಗೂ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ)ಯ ಸ್ವಾಗತಾಧ್ಯಕ್ಷ ಕೆ.ಜಯರಾಮ ಶೆಟ್ಟಿಯವರು ಬೆಳಿಗ್ಗೆ 8 ಗಂಟೆಗೆ ಉಳ್ಳಾಲ ಅಬ್ಬಕ್ಕ ಸರ್ಕಲ್‌ನಲ್ಲಿ ನೇರವೇರಿಸಲಿರುವರು ಹಾಗೂ ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಷನ್ ಉಳ್ಳಾಲ ವಲಯದ ಅಧ್ಯಕ್ಷರಾದ ಪ್ರವೀಣ್ ಬೀರಿಯವರು ಅಬ್ಬಕ್ಕಳ ಪ್ರತಿಮೆಗೆ ಮಾಲಾರ್ಪಣೆಗೈಯಲಿರುವರು.




