ಕಾಸರಗೋಡು : ಗಡಿನಾಡಿನ ಪತ್ರಕರ್ತ, ಲೇಖಕ ರವಿ ನಾಯ್ಕಾಪು ಅವರಿಗೆ ‘ಗಡಿನಾಡ ಸಾಹಿತ್ಯ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೆಂಗಳೂರಿನ ತಾಯಿಬೇರು ಸಾಮಾಜಿಕ ಮತ್ತು ಸಾಂಸ್ಕೃತಿಕ ಯುವ ವೇದಿಕೆ ನೀಡುವ ಪ್ರತಿಷ್ಠಿತ ಪ್ರಶಸ್ತಿಯನ್ನು ಇತ್ತೀಚಿಗೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಕೆ.ಕೆ. ಸಭಾಂಗಣದಲ್ಲಿ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜರುಗಿದ ದೇಸಿ ಸಂಸ್ಕೃತಿ ಸೌರಭ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
ಕರ್ನಾಟಕ ಸರಕಾರದ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಗೋವಿಂದ ಸ್ವಾಮಿ ಪ್ರಶಸ್ತಿ ಪ್ರದಾನ ಮಾಡಿದರು.

ಕೆ.ಕೆ. ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಕೆ. ಕುಂಬಣ್ಣ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ, ಪ್ರಾಧ್ಯಾಪಕ ಡಾ. ಎಚ್. ಲಕ್ಷ್ಮೀನಾರಾಯಣ ಸ್ವಾಮಿ, ನಿರೂಪಕಿ ಸೌಮ್ಯಾ ಗೌಡ, ವಿದುಷಿ ಪದ್ಮಜಾ ಜಯರಾಮ್ ಮುಖ್ಯ ಅತಿಥಿಗಳಾಗಿದ್ದರು. ತಾಯಿಬೇರು ಸಾಮಾಜಿಕ ಮತ್ತು ಸಾಂಸ್ಕೃತಿಕ ಯುವ ವೇದಿಕೆ ಕಾವ್ಯದರ್ಶಿ ಡಾ. ಕೆ.ಎನ್. ನಾಗೇಶ್ ಪ್ರಶಸ್ತಿ ವಿಜೇತರ ಪರಿಚಯಮಾಡಿದರು. ಸಂಘಟನೆ ಅಧ್ಯಕ್ಷ ಎ. ಜಗದೀಶ್ ಪ್ರಾಸ್ತಾವಿಕ ಮಾತನಾಡಿದರು.


