Site icon Ullalavani

ಕರಾವಳಿಯಲ್ಲಿ ಮತ್ತೆ ಮುಂಗಾರು ಸಕ್ರಿಯ : ಆಗಸ್ಟ್ 14 ರಿಂದ 19ರವರೆಗೆ ಯೆಲ್ಲೋ ಅಲರ್ಟ್‌

ಮಂಗಳೂರು : ಸ್ವಲ್ಪ ಸಮಯದ ವಿರಾಮದ ನಂತರ, ಕರಾವಳಿ ಪ್ರದೇಶದಲ್ಲಿ ಮುಂಗಾರು ಮತ್ತೆ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಆಗಸ್ಟ್ 14 ರಿಂದ 19 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ)  ಯಲ್ಲೋ  ಎಚ್ಚರಿಕೆ ನೀಡಿದೆ. ಈ ಅವಧಿಯಲ್ಲಿ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬುಧವಾರ, ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ   ಸಾಮಾನ್ಯ ಮಳೆಯಾಗಿದ್ದು, ಗರಿಷ್ಠ ತಾಪಮಾನ 26.9°C ಮತ್ತು ಕನಿಷ್ಠ ತಾಪಮಾನ 22.9°C ಆಗಿತ್ತು.

ಉಡುಪಿ ಜಿಲ್ಲೆಯಲ್ಲೂ ಬುಧವಾರ ಸಾಧಾರಣ ಮಳೆಯಾಗಿದ್ದು, ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಪಡುಬಿದ್ರಿ, ಕಾಪು, ಶಿರ್ವ, ಕಟಪಾಡಿ, ಉಡುಪಿ, ಮಲ್ಪೆ, ಬ್ರಹ್ಮಾವರ, ಕೋಟ, ಮಣಿಪಾಲ, ಹೆಬ್ರಿ, ಕಾರ್ಕಳ, ಕುಂದಾಪುರ ಮತ್ತು ಬೈಂದೂರು ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಮಳೆಯಾದ ವರದಿಯಾಗಿದೆ.

Exit mobile version