Site icon Ullalavani

ಸುಬ್ರಹ್ಮಣ್ಯ : ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ ; ಮಗು ಸಾವು

3347967 - pair of newborn feet on a blanket.

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು ಸೋಮವಾರ ರಾತ್ರಿ ಮಗುವಿಗೆ ಜನ್ಮ ನೀಡಿದ್ದು, ಮಂಗಳವಾರ ರಾತ್ರಿ ಮಗು ಮೃತಪಟ್ಟ ಘಟನೆ ನಡೆದಿದೆ.

ಅಪ್ರಾಪ್ತ ವಯಸ್ಸಿನ ಬಾಲಕಿ ಸಂಬಂಧಿಕರ ಮನೆಗೆ ಬಂದಿದ್ದಾಗ ಸಂಬಂಧಿಕ ಯುವಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪರಿಣಾಮ ಆಕೆ ಗರ್ಭವತಿಯಾಗಿದ್ದಳು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಯುವಕನ ಮೇಲೆ ಫೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿತ್ತು. ಸಮಯಕ್ಕೆ ಮೊದಲೇ ಮಗು ಜನನವಾಗಿದ್ದರಿಂದಲೇ ಹಾಗೂ ಮಗು ತಿಂಗಳಿಗೆ ತಕ್ಕಂತೆ ತೂಕ ಇಲ್ಲದೇ ಇರುವುದಿಂದ ಮೃತಪಟ್ಟಿರುವ ಬಗ್ಗೆ ಶಂಕಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Exit mobile version