Site icon Ullalavani

ಉಳ್ಳಾಲ ವೀರರಾಣಿ ಅಬ್ಬಕ್ಕ ಸರ್ಕಲ್ ಬಳಿ ಸ್ವಾತಂತ್ರ್ಯೋತ್ಸವ ಆಚರಣೆ

ಉಳ್ಳಾಲ : ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ಉಳ್ಳಾಲ ವಲಯ ಇವುಗಳ ಆಶ್ರಯದಲ್ಲಿ ಉಳ್ಳಾಲ ಅಬ್ಬಕ್ಕ ಸರ್ಕಲ್ ಬಳಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಮಾಜಿ ಶಾಸಕ ಸ್ವಾಗತ ಅಧ್ಯಕ್ಷ ಜಯರಾಮ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.

ಉಳ್ಳಾಲ ವಲಯ ಫೊಟೋಗ್ರಾಫರ್ ಅಸೋಸಿಯೇಷನ್ ಅಧ್ಯಕ್ಷ ಪ್ರವೀಣ್ ಬೀರಿ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆ ಗೈದರು. ಪೌರಾಯುಕ್ತ ನವೀನ್ ಹೆಗ್ಡೆ ಮಾತನಾಡಿ ಪರಿಸರ ಉಳಿಸುವ ಬಗ್ಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಉಪಾಧ್ಯಕ್ಷ ಆಲಿಯಬ್ಬ, ಚಿದಾನಂದ, ಸಿದ್ದೀಕ್ ದೇರಳಕಟ್ಟೆ, ಮಾಧವ ಉಳ್ಳಾಲ, ಸರ್ಫರಾಜ್ ಉಳ್ಳಾಲ, ಪೊಟೋಗ್ರಾಫರ್ ಸಂತೋಷ್ , ಸದಾನಂದ ಬಂಗೇರ, ಶಶಿಕಾಂತಿ, ಜಬ್ಬಾರ್ , ಅಸ್ಗರ್ ಉಳ್ಳಾಲ ಮತ್ತಿತರರು ಉಪಸ್ಥಿತರಿದ್ದರು. ಧನಲಕ್ಷ್ಮಿ ಗಟ್ಟಿ ಕಾರ್ಯಕ್ರಮ ನಿರೂಪಿಸಿದರು. ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ್ ಉಳ್ಳಾಲ ಸ್ವಾಗತಿಸಿ, ವಂದಿಸಿದರು.

Exit mobile version