Site icon Ullalavani

ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಪ್ರಧಾನ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಪ್ರಧಾನ ಕಛೇರಿಯಲ್ಲಿ ನಡೆದ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು.
ನಿವೃತ್ತ ಯೋಧ ನಾಯಕ್ ಜಗದೀಶ್ ಎಮ್. ರವರು ಧ್ವಜಾರೋಹಣ ನೆರವೇರಿಸಿ, ಮಾತನಾಡಿ ಸೇನೆಯ ಸೇವೆಯಲ್ಲಿರುವಾಗ ತಾವು ಪಾಲ್ಗೊಂಡಿದ್ದ ಕಾರ್ಯಚರಣೆ ಬಗ್ಗೆ ಪ್ರಸ್ತಾಪಿಸಿದರು. ದೇಶ ಸೇವೆಯಲ್ಲಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ದೇಶ ಸೇವೆಯ ಕಾಯಕದ ಜೊತೆಗೆ ತಮ್ಮ ಭವಿಷ್ಯವನ್ನು ಕೂಡ ಕೆಲಸದ ಭದ್ರತೆಯೊಂದಿಗೆ ಗಟ್ಟಿ ಗೊಳಿಸಬಹುದು. ದೇಶವನ್ನು ಬಲಿಷ್ಟಗೊಳಿಸುವ ಜವಾಬ್ದಾರಿ ಪ್ರಜೆಗಳದ್ದು, ಕರಾವಳಿಯ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಹೇಳಿದರು.


ಸಂಘದ ಅಧ್ಯಕ್ಷರಾದ “ಸಹಕಾರ ರತ್ನ” ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ ಸಂಘವು ಪ್ರತಿ ವರ್ಷ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ದೇಶಕ್ಕಾಗಿ ಸೇವೆಗೈದ ಯೋಧರನ್ನು ಸನ್ಮಾನಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸುತ್ತಾ ಬರುತ್ತಿದೆ. ಈ ಬಾರಿಯ ಸ್ವಾತಂತ್ರ್ಯೋತ್ಸವದಲ್ಲಿ ನಮ್ಮ ಕರಾವಳಿಯ ಹೆಮ್ಮೆಯ ನಿವೃತ್ತ ಯೋಧ ನಾಯಕ್ ಜಗದೀಶ್ ಎಮ್. ರವರನ್ನು ಇವತ್ತಿನ ಸಮಾರಂಭದಲ್ಲಿ ಸನ್ಮಾನಿಸಲು ನಮ್ಮ ಸಂಘ ತುಂಬಾ ಹೆಮ್ಮೆ ಪಡುತ್ತಿದೆ, ದೇಶಕೋಸ್ಕರ ಹಲವು ಯುದ್ಧದಲ್ಲಿ ಭಾಗವಹಿಸಿ ದೇಶ ರಕ್ಷಣೆಯಲ್ಲಿ ತೊಡಗಿಸಿಕೊಂಡ ಯೋಧರನ್ನು ಸನ್ಮಾನಿಸುವುದು ನಮ್ಮ ಭಾಗ್ಯವೆಂದರು.
ಈ ಸಂದರ್ಭದಲ್ಲಿ ನಿವೃತ್ತ ಯೋಧ ನಾಯಕ್ ಜಗದೀಶ್ ಎಮ್. ಇವರನ್ನು ಸಂಘದ ವತಿಯಿಂದ ಸನ್ಮಾನಿಸುವ ಮೂಲಕ ಗೌರವಿಸಲಾಯಿತು.
ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ. ಸಂಘದ ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ, ಆನಂದ ಎಸ್ ಕೊಂಡಾಣ, ಸೀತಾರಾಮ್ ಎನ್, ರಮಾನಾಥ್ ಸನಿಲ್, ದಿವಾಕರ್ ಬಿ.ಪಿ., ಗೋಪಾಲ್ ಎಮ್, ಶ್ರೀಮತಿ ಉಮಾವತಿ ಶ್ರೀಮತಿ ಚಂದ್ರಾವತಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣ ಗುರು ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಗೌರವ ಅಧ್ಯಕ್ಷರಾದ ವಾಮನ್ ಕೆ. ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಶಾಖಾಧಿಕಾರಿ ಶ್ರೀಮತಿ ಚೈತ್ರಾ ಸ್ವಾಗತಿಸಿ, ಸಂಘದ ಶಾಖಾಧಿಕಾರಿ ಶ್ರೀಮತಿ ಸುಜಾತ ರವರು ವಂದಿಸಿದರು. ಸಹಾಯಕ ಪ್ರಬಂದಕರಾದ ವಿಶ್ವನಾಥ ರವರು ಕಾರ್ಯಕ್ರಮ ನಿರೂಪಿಸಿದರು.

Exit mobile version