Site icon Ullalavani

ಬೈಕ್‌ ಢಿಕ್ಕಿ ಗಾಯಾಳು ಕುಂಪಲ ಚೇತನ ನಗರದ ಲೋಕೇಶ್ ಮೃತ್ಯು


ಕುಂಪಲ: ಬೈಕ್‌ ಢಿಕ್ಕಿ ಹೊಡೆದು ಗಂಭೀರ ಗಾಯಗೋಂಡು ಆಸ್ಪತ್ರೆಯಲ್ಲಿದ್ದ ಪಾದಚಾರಿ ಕುಂಪಲ ಚೇತನ ನಗರ ನಿವಾಸಿ ಲೋಕೇಶ್ (48) ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.
ತೊಕ್ಕೊಟ್ಟು ಸಮೀಪದ ಕಾಪಿಕಾಡು ಎಂಬಲ್ಲಿ ಘಟನೆ ನಡೆದಿದೆ. ತೊಕ್ಕೊಟ್ಟಿನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಲೋಕೇಶ್ ಅವರು ಆ.15 ರ ಸಂಜೆ ರಾತ್ರಿ ಪಾಳಿ ಕೆಲಸಕ್ಕೆ ತೆರಳುವಾಗ ಕಾಪಿಕಾಡು ಎಂಬಲ್ಲಿ ಹೆದ್ದಾರಿ ರಸ್ತೆ ದಾಟುತ್ತಿದ್ದ ವೇಳೆ ಮೋಟಾರ್ ಬೈಕ್ ಒಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.ಲೋಕೇಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಂಜೆ ಮೃತಪಟ್ಟಿದ್ದಾರೆ. ಘಟನೆ ಕುರಿತಂತೆ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೃತ ಲೋಕೇಶ್ ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

Exit mobile version