Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

ಕೆ.ಪಾಂಡ್ಯರಾಜ್‌ ಬಲ್ಲಾಳ್‌ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಪಿಲಾರು ಗದ್ದೆಯಲ್ಲಿ ನಾಟಿ ಕಾರ್ಯ

UllalaVaniBy UllalaVaniAugust 25, 2025Updated:August 25, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ : ಯಾವುದೇ ಉನ್ನತ ವ್ಯಾಸಾಂಗ ಮಾಡುವುದಾದರೂ ಊಟ ಅನಿವಾರ್ಯ. ಹಾಗಾಗಿ ಅಕ್ಕಿಯ ಬೆಳೆಸುವ ಮಹತ್ವವನ್ನು ಎಲ್ಲರೂ ಅರಿಯಬೇಕಿದೆ. ತಳಮಟ್ಟದ ಕಾರ್ಯವಾದರೂ ಕೃಷಿ ಕಾಯಕದ ಕುರಿತು ಸ್ವಲ್ಪವಾದರೂ ತಿಳಿದಿರಬೇಕು. ಸಂಘ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೃಷಿ ಹೇಗೆ ಆಗುತ್ತದೆ ಅನ್ನುವುದರ ಅರಿವು ಕಾರ್ಯದಲ್ಲಿ ಹೆಚ್ಚಾಗಿ ತೊಡಗಿಸಬೇಕು ಎಂದು ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಸಂಜೀವ ಪಿಲಾರ್‌ ಹೇಳಿದರು.

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ, ಮಾಧ್ಯಮ ಕೇಂದ್ರ ಉಳ್ಳಾಲ, ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ ತಾಲೂಕು, ದ. ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ಕೃಷಿ ವಿಜ್ಞಾನ ಕೇಂದ್ರ, ಕೃಷಿ ಇಲಾಖೆ ಜಂಟಿ ಆಶ್ರಯದಲ್ಲಿ ವಿಧಾನಸಭಾಧ್ಯಕ್ಷರು ಹಾಗೂ ಕೃಷಿ ಸಚಿವರ ಭಾಗವಹಿಸುವಿಕೆಯಲ್ಲಿ ಆ. 30 ರಂದು ನಡೆಯುವ 4 ಎಕರೆ ಹಡಿಲು ಭೂಮಿ ಕೃಷಿ ಕಾರ್ಯಕ್ರಮದ ಪೂರ್ವಭಾವಿಯಾಗಿ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಗದ್ದೆಯಲ್ಲಿ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡ ಉಳ್ಳಾಲದ ಕೆ. ಪಾಂಡ್ಯರಾಜ್‌ ಬಲ್ಲಾಳ್‌ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.


ಮರದಲ್ಲಿ ಆಗುವ ಕುರಿತು ವಿದ್ಯಾರ್ಥಿಗಳಲ್ಲಿ ಗೊಂದಲವಿತ್ತು. ಆದರೆ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡ ನಂತರ ನಗರ ಪ್ರದೇಶದ ವಿದ್ಯಾರ್ಥಿಗಳ ಅರಿವಿಗೆ ಬಂದಿದೆ . ಬ್ಯಾಂಕ್‌ ಹಾಗೂ ಮಾಧ್ಯಮದವರು ಲಾಭದ ಉದ್ದೇಶದಿಂದ ಕಾರ್ಯಕ್ರಮ ನಡೆಸುತ್ತಿಲ್ಲ, ವಿದ್ಯಾರ್ಥಿಗಳಲ್ಲಿ ಕೃಷಿಯ ಅರಿವು ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾಗುತ್ತಿದೆ. ಆ.30 ಸ್ಪೀಕರ್‌ ಯು.ಟಿ.ಖಾದರ್‌ ಸಮಾರಂಭ ಉದ್ಘಾಟಿಸಲಿದ್ದಾರೆ, ಹಳ್ಳಿಗೆ ಕೃಷಿ ಮಂತ್ರಿಯನ್ನು ಕರೆಸುವ ಭರವಸೆ ನೀಡಿದ್ದಾರೆ. ಆ.30 ರಂದು ಬೆಳಿಗ್ಗೆಯಿಂದ ಸಂಜೆಯವರೆಗೂ ಕೃಷಿ ಚಟುವಟಿಕೆ ಹಾಗೂ ಆ.31 ರಂದು ಗದ್ದೆಯಲ್ಲಿ ಕ್ರೀಡಾಕೂಟಗಳು ಜರಗಲಿದೆ. ವಿದ್ಯಾರ್ಥಿಗಳು ಕೆಲಸ ಮಾಡಿದ ಗದ್ದೆಯಲ್ಲಿ ನಾಟಿ ಕಾರ್ಯ ನಡೆಸಿ ಹೊಸ ಅಕ್ಕಿ ಊಟ ಮಾಡುವ ಕಾರ್ಯದವರೆಗೂ ಮುನ್ನಡೆಸಲಿದ್ದೇವೆ ಎಂದರು.
ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ ಸವಿತಾ ಮಾತನಾಡಿ, ಗದ್ದೆ ಕೆಲಸದಲ್ಲಿ ತೊಡಗಲು ಕೆ.ಪಾಂಡ್ಯರಾಜ್‌ ಬಲ್ಲಾಳ್‌ ಕಾಲೇಜು ಕೊಟ್ಟ ಅವಕಾಶಕ್ಕೆ ಅಭಿನಂದನೆಗಳು. ಗದ್ದೆಗೆ ಹೋಗಲಿದೆ ಅನ್ನುವಾಗ ವಿದ್ಯಾರ್ಥಿಗಳು ಉತ್ಸಾಹದಿಂದ ಒಪ್ಪಿಕೊಂಡರು, ಗದ್ದೆಯಲ್ಲಿ ಕೆಲಸವಿದೆ ಅನ್ನುವಾಗ ಕೆಲವರು ಹಿಂದೆ ಸರಿದಿದ್ದರು. ಆದರೆ ಇಂದು ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡ ಎಲ್ಲಾ ವಿದ್ಯಾರ್ಥಿಗಳು ವಿಶಿಷ್ಟ ಅನುಭವ ಸಂಪಾದಿಸಿಕೊಂಡಿದ್ದಾರೆ. ಗೌರವಯುತವಾದ ಕಾರ್ಯ, ತರಗತಿಯಿಂದ ಹೊರಬಂದ ವಾತಾವರಣ ಖುಷಿಯನ್ನು ನೀಡಿದೆ ಎಂದರು.
ಕೃಷಿ ಕಾಯಕದಲ್ಲಿ 35 ವಿದ್ಯಾರ್ಥಿಗಳು ತೊಡಗಿಸಿಕೊಂಡರು.
ಈ ಸಂದರ್ಭ ಈಶ್ವರ್‌ ಶೆಟ್ಟಿ ಪಿಲಾರು ಮೇಲ್ಮನೆ, ಲವೀಶ್‌ ಶೆಟ್ಟಿ ಪಿಲಾರು ಮೇಲ್ಮನೆ, ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ವಜ್ರ ಗುಜರನ್‌ ಉಪಸ್ಥಿತರಿದ್ದರು. ಪತ್ರಕರ್ತೆ ಸುಷ್ಮಿತಾ ಸಾಮಾನಿ ನಿರೂಪಿಸಿ ವಂದಿಸಿದರು.

ʻರೈತರ ಕಷ್ಟಗಳು ಅರಿವಿಗೆ ಬಂದಿದೆ. ಅಕ್ಕಿಯ ಮಹತ್ವದ ಕುರಿತು ಗದ್ದೆಗಿಳಿದು ತಿಳಿಯುವಂತಾಯಿತು. ನಗರದಿಂದ ಬಂದವರಿಗೆ ಇದೊಂದು ಹೊಸ ಅನುಭವ, ಅವಕಾಶ ಕಲ್ಪಿಸಿದ ಕಾಲೇಜು ಆಡಳಿತ ಮಂಡಳಿ, ಸಂಘಟಕರಿಗೆ ಕೃತಜ್ಞತೆಗಳುʼ
ನಫೀಜ ಇಷ್ಕ್‌
ವಿದ್ಯಾರ್ಥಿನಿ

ʻವಿಶಿಷ್ಟ ಅನುಭವ ಗದ್ದೆಯಲ್ಲಿ ಆಯಿತು. ಗದ್ದೆಗಳನ್ನು ದೂರದಲ್ಲಿ ಮಾತ್ರ ನೋಡುತ್ತಿದ್ದೆವು. ಆದರೆ ಇಳಿದು ಕೆಲಸ ಮಾಡಿದಂತಹ ಅನುಭವ ಇದೇ ಮೊದಲ ಬಾರಿಗೆ ಆಯಿತು. ಈ ಮೂಲಕ ಕೃಷಿ ಕೆಲಸದ ಅರಿವು ಜಾಗೃತಿ ಎಲ್ಲರಲ್ಲಿ ಮೂಡಿದೆʼ
ಖತೀಜಾ ಹನಿ
ವಿದ್ಯಾರ್ಥಿನಿ

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

February 5, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
ಉಳ್ಳಾಲ

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

By UllalaVaniFebruary 5, 20260

ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆಗೊಳಿಸಿದ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರುಉಳ್ಳಾಲ: ಉಳ್ಳಾಲದ ಮಣ್ಣಿನಲ್ಲಿ ನಾವು ಖುಷಿಯಿಂದ, ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿರುವುದು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d