ಕೋಟೆಕಾರು : ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘ, ಮಾಧ್ಯಮ ಕೇಂದ್ರ ತೊಕ್ಕೊಟ್ಟು, ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಇವರ ನೇತೃತ್ವದಲ್ಲಿ ಕೃಷಿ ಇಲಾಖೆ ಮಂಗಳೂರು, ಶ್ರೀ ಬಾಲಾಂಜನೇಯ ವ್ಯಾಯಾಮ ಶಾಲೆ ಪಿಲಾರು ಸಹಯೋಗದೊಂದಿಗೆ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇವರ ತಾಂತ್ರಿಕ ಮಾರ್ಗದರ್ಶನದೊಂದಿಗೆ ಗ್ರಾಮ ಸಂಪರ್ಕ ಅಭಿಯಾನದ ಅಂಗವಾಗಿ ಕೃಷಿಯೆಡೆಗೆ ವಿದ್ಯಾರ್ಥಿ ಸಮೂಹ ಹಾಗೂ ಯುವಜನತೆಯ ನಡೆ – ಕೃಷಿ ಅಧ್ಯಯನ ಹಾಗೂ ಚಟುವಟಿಕೆಗಳಿಗೆ ಚಾಲನೆ ಕಾರ್ಯಕ್ರಮ ಆ.30ರಂದು ಬೆಳಗ್ಗೆ 9ರಿಂದ ಸೋಮೇಶ್ವರ ಗ್ರಾಮದ ಪಿಲಾರು ಬೈಲು ಗದ್ದೆಯಲ್ಲಿ ನಡೆಯಲಿದೆ.


ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾಧಿಕಾರಿ ದರ್ಶನ್ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯಾಧಿಕಾರಿ ನರ್ವಾಡೆ ವಿನಾಯಕ, ಜಂಟಿ ಕೃಷಿ ನಿರ್ದೇಶಕ ಡಾ| ಹೊನ್ನಪ್ಪ ಗೋವಿಂದ ಗೌಡ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಜೇಶ್ವರಿ ಹೆಚ್.ಹೆಚ್, ಮಂಗಳೂರು ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥ ಡಾ| ಟಿ.ಜೆ.ರಮೇಶ, ಪ್ರಗತಿಪರ ಕೃಷಿಕ ಸೀತಾರಾಮ ಶೆಟ್ಟಿ ಪಿಲಾರು ಮೇಗಿನಮನೆ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ, ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಯಾನಂದ ಎನ್.ಸುವರ್ಣ, ಸೋಮೇಶ್ವರ ಪುರಸಭೆಯ ಉಪಾಧ್ಯಕ್ಷ ರವಿಶಂಕರ್ ಸೋಮೇಶ್ವರ, ಸದಸ್ಯೆ ಸ್ವಪ್ನ ಶೆಟ್ಟಿ, ಬಾಲಾಂಜನೇಯ ವ್ಯಾಯಾಮ ಶಾಲೆಯ ಅಧ್ಯಕ್ಷ ಪುರಂದರದಾಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈಶ್ವರ ಶೆಟ್ಟಿ ಪಿಲಾರು, ಮೇಲ್ಮನೆ, ಗಂಗಯ್ಯ ಗಟ್ಟಿ ಪಿಲಾರು ಹೊಸಮನೆ, ಪ್ರವೀಣ್ ಶೆಟ್ಟಿ ಮೇಗಿನಮನೆ ಮಸ್ಕತ್ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.





