ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ನೀರುಮಾರ್ಗ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ (ರಿ.) ನೀರುಮಾರ್ಗ, ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ (ರಿ.) ಸುಬ್ರಹ್ಮಣ್ಯ ನಗರ, ನೀರುಮಾರ್ಗ ಇವರುಗಳ ಜಂಟಿ ಸಹಯೋಗದೊಂದಿಗೆ ಆಗಸ್ಟ್ 31ರಂದು ಆದಿತ್ಯವಾರ ಬೆಳಿಗ್ಗೆ 9.30 ರಿಂದ 12.30ರ ವರೆಗೆ ನೀರುಮಾರ್ಗದ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿಯ ಸಭಾಭವನದಲ್ಲಿ ನಡೆಯಲಿದೆ

ಈ ವೈದ್ಯಕೀಯ ಶಿಬಿರದಲ್ಲಿ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ. ಇವರ ನುರಿತ ವೈದ್ಯರ ತಂಡದವರಿಂದ ದಂತ ತಪಾಸಣೆ, ಅನಾರೋಗ್ಯಕರ ಹಲ್ಲುಗಳನ್ನು ಕೀಳುವುದು, ಹುಳುಕು ಹಲ್ಲುಗಳ ಭರ್ತಿ ಮಾಡುವುದು, ಹಲ್ಲುಗಳನ್ನು ಸ್ವಚ್ಚಗೊಳಿಸುವುದು, ಹಾಗೂ ಮಂಗಳ ಕಾಲೇಜು ,ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ, ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಅಗತ್ಯವುಳ್ಳವರಿಗೆ ಸಂಘದ ವತಿಯಿಂದ ಉಚಿತ ಕನ್ನಡಕ ವಿತರಣೆಯನ್ನು ಮಾಡಲಾಗುವುದು. ಈ ಶಿಬಿರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೊಟ್ಟೋ ವತಿಯಿಂದ ಅಂಗಾಂಗ ದಾನದ ಬಗ್ಗೆ ಜಾಗೃತಿ ಅಭಿಯಾನ ನಡೆಯಲಿರುವುದು..
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

