Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಹಂಪನಕಟ್ಟೆ : ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣಾ ಶಿಬಿರ

UllalaVaniBy UllalaVaniSeptember 15, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಹಂಪನಕಟ್ಟ ಶಾಖೆ ಮತ್ತು ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ). ಮಂಗಳೂರು ಹಾಗೂ ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ ಇವರ ಜಂಟಿ ಸಹಯೋಗದೊಂದಿಗೆ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣಾ ಶಿಬಿರವು ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನ ಕಟ್ಟಡದ ಎರಡನೇ ಮಹಡಿಯಲ್ಲಿ ಜರುಗಿತು.
ಈ ಕಾರ್ಯಕ್ರಮವನ್ನು ನಿವೃತ್ತ ಸಹಕಾರಿ ಸಂಘಗಳ ಉಪ ನಿಬಂಧಕರಾದ ಚಂದ್ರಶೇಖರ್ ಸುವರ್ಣ ರವರು ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಉಪಸ್ತಿತರಿದ್ದ ಲಯನ್ಸ್ ಕ್ಲಬ್ ಮಂಗಳೂರು, ಆದಿತ್ಯ ಇದರ ಅಧ್ಯಕ್ಷರಾದ ಲಯನ್ ನರಸಿಂಹ ಪೈ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರ ಮುಂದಾಳತ್ವದಲ್ಲಿ ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ವರ್ಗದ ಜನರಿಗೆ ಆರೋಗ್ಯದ ದೃಷ್ಟಿಯಿಂದ ಜನರ ಕಾಳಜಿ ಮಾಡುತ್ತಿರುವುದು ಸಂಘದ ಉನ್ನತಿಗೆ ಮುಖ್ಯವಾದ ಕಾರಣ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದೊಂದಿಗೆ ನಿರಂತರವಾಗಿ ಶಿಬಿರಗಳನ್ನು ಆಯೋಜಿಸಿಕೊಂಡು ಬರುತ್ತಿದ್ದೇವೆ” ಎಂದರು.
ದ ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ). ಮಂಗಳೂರು ಇದರ ಅಧ್ಯಕ್ಷರು ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು. ಇದರ ನಿರ್ದೇಶಕರಾದ ಸೀತಾರಾಮ್ ಎನ್ ರವರು ಮಾತನಾಡಿ ಹಿರಿಯ ನಾಗರಿಕರಿಗೆ ಆರೋಗ್ಯದ ಕಾಳಜಿಯ ದೃಷ್ಟಿಯಿಂದ ಆರೋಗ್ಯ ತಪಾಸಣಾ ಶಿಬಿರಗಳು ಅಗತ್ಯವಾಗಿರುತ್ತದೆ. ಆದ್ದರಿಂದ ಎಲ್ಲರೂ ಈ ಶಿಬಿರದ ಪ್ರಯೋಜನೆಯನ್ನು ಪಡೆದು ಶಿಬಿರವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿಕೊಳ್ಳುತ್ತೇನೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ, “ಸಂಘವು ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 89ಕ್ಕೂ ಮಿಕ್ಕಿ ಆರೋಗ್ಯ ಶಿಬಿರಗಳನ್ನು ಆಯೋಜಿಸಿದ್ದು, ಶಿಬಿರಾರ್ಥಿಗಳಿಗೆ ಉಚಿತ ಔಷಧಿ ವಿತರಣೆ, ಅಗತ್ಯವುಳ್ಳವರಿಗೆ ಉಚಿತ ಕಣ್ಣಿನ ಪೊರೆಯ ಚಿಕಿತ್ಸೆಯನ್ನು ಸಹಭಾಗಿ ಆಸ್ಪತ್ರೆಗಳಲ್ಲಿ ನಡೆಸುತ್ತಾ ಬಂದಿರುತ್ತದೆ. ನಮ್ಮ ಶಿಬಿರಗಳಲ್ಲಿ ಒಟ್ಟು 19,೦೦೦ ಕ್ಕೂ ಮಿಕ್ಕಿ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗಿದೆ. ಸಂಘವು ಹಿರಿಯ ನಾಗರಿಕರ ಆರೋಗ್ಯದ ಕಾಳಜಿಯ ದೃಷ್ಟಿಯಿಂದ ಉಚಿತ ಆರೋಗ್ಯ ಶಿಬಿರಗಳನ್ನು ಪ್ರತಿ ವರ್ಷ ನಿರಂತರವಾಗಿ ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ). ಮಂಗಳೂರು ಇವರ ಮಹಾಸಭೆಯ ದಿನದಂದು ಆಯೋಜಿಸುತ್ತಾ ಬರುತ್ತಿದೆ. ಈ ಶಿಬಿರಕ್ಕೆ ಸಂಪೂರ್ಣ ಸಹಕಾರ ನೀಡಿರುವ ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ). ಮಂಗಳೂರು ಇವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಹಾಗೆಯೇ ಶಿಬಿರದ ಯಶಸ್ಸಿಗೆ ಸಹಕರಿಸಿರುವ ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ ಇದರ ಸರ್ವ ಪದಾಧಿಕಾರಿಗಳಿಗೆ ಹಾಗೂ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಇವರ ಆಡಳಿತ ವರ್ಗ ಹಾಗೂ ವೈದ್ಯರ ತಂಡದವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಇಂದಿನ ಈ ಶಿಬಿರವು ಎಲ್ಲ ಶಿಬಿರಾರ್ಥಿಗಳಿಗೆ ಉಪಯುಕ್ತವಾಗಲಿ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ನಿರ್ದೇಶಕರಾದ ರಮಾನಾಥ್ ಸನಿಲ್, ಬಿ.ಪಿ.ದಿವಾಕರ್, ಗೋಪಾಲ್ ಎಂ, ಶ್ರೀಮತಿ ಉಮಾವತಿ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಸ್ಥಾಪಕಾಧ್ಯಕ್ಷರಾದ ವಾಮನ್ ಕೆ, ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ). ಮಂಗಳೂರು ಇದರ ಗೌರವಾಧ್ಯಕ್ಷರಾದ ಉಮೇಶ್, ನಿಕಟಪೂರ್ವ ಅಧ್ಯಕ್ಷರಾದ ಬಿ.ಎಂ ರಾಜ್ ಗೋಪಾಲ್, ಲಯನ್ಸ್ ಮತ್ತು ಲಿಯೊ ಕ್ಲಬ್ ಮಂಗಳೂರು ಇದರ ಝೋನಲ್ ಚೇರ್ ಪರ್ಸನ್ ಆಗಿರುವ ಲಯನ್ ಶೀನ ಪೂಜಾರಿ, ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಇದರ ದಂತ ವೈದ್ಯರಾದ ಶ್ರೀಮತಿ ಸೌಮ್ಯ ಮತ್ತಿತ್ತರರು ಉಪಸ್ಧಿತರಿದ್ದರು.
ಸುಮಾರು 150ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖಾಧಿಕಾರಿ ಶ್ರೀಮತಿ ಪ್ರಣೀತಾ ಇವರು ಸ್ವಾಗತಿಸಿ, ಶಾಖಾಧಿಕಾರಿ ಶ್ರೀಮತಿ ಅಕ್ಷತಾ ವಂದಿಸಿದರು. ಹಿರಿಯ ಶಾಖಾಧಿಕಾರಿ ಶ್ರೀಮತಿ ಸ್ವಾತಿ ರವರು ಕಾರ್ಯಕ್ರಮ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೊಲ್ಯ ಬಿಲ್ಲವ ಸೇವಾ ಸಮಾಜ ಅಧ್ಯಕ್ಷರಾಗಿ ಗೋಪಾಲ ಕೊಂಡಾಣ ಪುನರಾಯ್ಕೆ

August 20, 2026

ಮಂಗಳೂರಿನ ನಿಟ್ಟೆ ಉಷಾ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನಲ್ಲಿ ಸ್ಕೋಪಿಂಗ್ ರಿವ್ಯೂ ಮತ್ತು ರೆಫರೆನ್ಸ್ ಮ್ಯಾನೇಜ್‌ಮೆಂಟ್ ಕುರಿತು ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರ

August 20, 2026

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

August 20, 2026

Comments are closed.

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
All News

ಕೊಲ್ಯ ಬಿಲ್ಲವ ಸೇವಾ ಸಮಾಜ ಅಧ್ಯಕ್ಷರಾಗಿ ಗೋಪಾಲ ಕೊಂಡಾಣ ಪುನರಾಯ್ಕೆ

By UllalaVaniAugust 20, 20260

ಕೊಲ್ಯ: ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಇದರ 2026-27 ನೇ ಸಾಲಿನ ಅಧ್ಯಕ್ಷರಾಗಿ ಗೋಪಾಲ ಕೊಂಡಾಣ ಇವರು ಪುನರಾಯ್ಕೆಗೊಂಡಿದ್ದಾರೆ.…

ಮಂಗಳೂರಿನ ನಿಟ್ಟೆ ಉಷಾ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನಲ್ಲಿ ಸ್ಕೋಪಿಂಗ್ ರಿವ್ಯೂ ಮತ್ತು ರೆಫರೆನ್ಸ್ ಮ್ಯಾನೇಜ್‌ಮೆಂಟ್ ಕುರಿತು ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರ

August 20, 2026

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

August 20, 2026

ಮುನ್ನೂರು ಗ್ರಾಮದ ಸಿಪಿಎಂ ಪಕ್ಷದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಸಪಲ್ಯ ಬಿಲ್ಲರಗುಡ್ಡೆ ನಿಧನ

August 20, 2026
1 2 3 … 2,068 Next
Automatic YouTube Gallery

ಮಂಗಳೂರು ದಕ್ಷಿಣ ಎಸಿಪಿ ಆಫೀಸಿನ ಎದುರೇ ಇರುವ ದೇವಸ್ಥಾನದಿಂದ ಭಾರೀ ಕಳವು..!

ಶ್ರೀ ಮಹಾಲಕ್ಷ್ಮೀ ದೇವಸ್ಥಾನದಿಂದ ದೇವಿಯ ಆಭರಣ ಕಳವು; ಮಂಗಳೂರು ದಕ್ಷಿಣ ಎಸಿಪಿ ಆಫೀಸಿನ ಮುಂಭಾಗವಿರುವ ದೇವಸ್ಥಾನ

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಂಗಳೂರು ದಕ್ಷಿಣ ಎಸಿಪಿ ಆಫೀಸಿನ ಎದುರೇ ಇರುವ ದೇವಸ್ಥಾನದಿಂದ ಭಾರೀ ಕಳವು..!
Now Playing
ಮಂಗಳೂರು ದಕ್ಷಿಣ ಎಸಿಪಿ ಆಫೀಸಿನ ಎದುರೇ ಇರುವ ದೇವಸ್ಥಾನದಿಂದ ಭಾರೀ ಕಳವು..!
ಶ್ರೀ ಮಹಾಲಕ್ಷ್ಮೀ ದೇವಸ್ಥಾನದಿಂದ ದೇವಿಯ ಆಭರಣ ಕಳವು; ಮಂಗಳೂರು ದಕ್ಷಿಣ ಎಸಿಪಿ ...
ಶ್ರೀ ಮಹಾಲಕ್ಷ್ಮೀ ದೇವಸ್ಥಾನದಿಂದ ದೇವಿಯ ಆಭರಣ ಕಳವು; ಮಂಗಳೂರು ದಕ್ಷಿಣ ಎಸಿಪಿ ಆಫೀಸಿನ ಮುಂಭಾಗವಿರುವ ದೇವಸ್ಥಾನ

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆಳ್ವಾಸ್ ಪ್ರಗತಿಯಲ್ಲಿ 2416 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ- ವಿವೇಕ್ ಆಳ್ವ
Now Playing
ಆಳ್ವಾಸ್ ಪ್ರಗತಿಯಲ್ಲಿ 2416 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ- ವಿವೇಕ್ ಆಳ್ವ
ಆಳ್ವಾಸ್ ಪ್ರಗತಿಯಲ್ಲಿ 2416 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ;6183 ಮಂದಿ ...
ಆಳ್ವಾಸ್ ಪ್ರಗತಿಯಲ್ಲಿ 2416 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ;6183 ಮಂದಿ ಶಾರ್ಟ್ಲಿಸ್ಟ್: ಸುದ್ದಿಗೋಷ್ಠಿಯಲ್ಲಿ ವಿವೇಕ್ ಆಳ್ವ ಮಾಹಿತಿ

ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ವತಿಯಿಂದ ನಡೆದಿದ್ದ ಉದ್ಯೋಗ ಮೇಳ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version