ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಭಾರಿ ವರ್ಷಧಾರೆ ಮುಂದುವರೆದಿದೆ. ಈ ಬಗ್ಗೆ ರಾಜ್ಯ ಹವಾಮಾನ ಇಲಾಖೆಯು ಮುನ್ಸೂಚನೆ ಕೊಟ್ಟಿರುವ ಮಾಹಿತಿ ಇಲ್ಲಿದೆ.

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಲಿದ್ದು, 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲರ್ಟ್ ಘೋಷಣೆ : ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ಕೊಡಗು, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆ : ಕ್ಯಾಸಲ್ರಾಕ್, ನೆಲೋಗಿ, ಗಂಗಾಪುರ, ಬಿಳಗಿ, ಆಲಮಟ್ಟಿ, ತಾಳಿಕೋಟೆ, ಸುಳ್ಯ, ರಾಯಲ್ಪಾಡು, ಕೋಲಾರ, ಗುಬ್ಬಿ, ಗೋಕರ್ಣ, ಚಿಕ್ಕಬಳ್ಳಾಪುರ, ಅಥಣಿ, ಯಡ್ರಾಮಿ, ಉಡುಪಿ, ಶಕ್ತಿನಗರ, ಸಂಕೇಶ್ವರ, ಪುತ್ತೂರು, ಪೊನ್ನಂಪೇಟೆ, ಕುಂದಾಪುರ, ಕೊಟ್ಟಿಗೆಹಾರ, ಹುಣಸಗಿ, ಕೆಂಭಾವಿ, ಹೆಚ್.ಡಿ.ಕೋಟೆ, ಧರ್ಮಸ್ಥಳ, ಚಿಂಚೋಳಿ, ಮುದ್ದೇಬಿಹಾಳ, ಕಮಲಾಪುರ, ಬೀದರ್, ಭಾಲ್ಕಿ ಹಾಗೂ ಭಾಗಮಂಡಲದಲ್ಲಿ ಮಂಗಳವಾರ ಹೆಚ್ಚಿನ ಮಳೆಯಾಗಿದೆ.
ರಾಜಧಾನಿಯ ವಾತಾವರಣ : ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಲಿದೆ. ನಗರದಲ್ಲಿ 28.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೆಚ್ಎಎಲ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

