Site icon Ullalavani

ರಾಜ್ಯದಲ್ಲಿ ಮತ್ತೆ ಭಾರಿ ಮಳೆ – ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಭಾರಿ ವರ್ಷಧಾರೆ ಮುಂದುವರೆದಿದೆ. ಈ ಬಗ್ಗೆ ರಾಜ್ಯ ಹವಾಮಾನ ಇಲಾಖೆಯು ಮುನ್ಸೂಚನೆ ಕೊಟ್ಟಿರುವ ಮಾಹಿತಿ ಇಲ್ಲಿದೆ.

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಲಿದ್ದು, 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಲರ್ಟ್​ ಘೋಷಣೆ : ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ಕೊಡಗು, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ : ಕ್ಯಾಸಲ್​​ರಾಕ್, ನೆಲೋಗಿ, ಗಂಗಾಪುರ, ಬಿಳಗಿ, ಆಲಮಟ್ಟಿ, ತಾಳಿಕೋಟೆ, ಸುಳ್ಯ, ರಾಯಲ್ಪಾಡು, ಕೋಲಾರ, ಗುಬ್ಬಿ, ಗೋಕರ್ಣ, ಚಿಕ್ಕಬಳ್ಳಾಪುರ, ಅಥಣಿ, ಯಡ್ರಾಮಿ, ಉಡುಪಿ, ಶಕ್ತಿನಗರ, ಸಂಕೇಶ್ವರ, ಪುತ್ತೂರು, ಪೊನ್ನಂಪೇಟೆ, ಕುಂದಾಪುರ, ಕೊಟ್ಟಿಗೆಹಾರ, ಹುಣಸಗಿ, ಕೆಂಭಾವಿ, ಹೆಚ್.ಡಿ.ಕೋಟೆ, ಧರ್ಮಸ್ಥಳ, ಚಿಂಚೋಳಿ, ಮುದ್ದೇಬಿಹಾಳ, ಕಮಲಾಪುರ, ಬೀದರ್, ಭಾಲ್ಕಿ ಹಾಗೂ ಭಾಗಮಂಡಲದಲ್ಲಿ ಮಂಗಳವಾರ ಹೆಚ್ಚಿನ ಮಳೆಯಾಗಿದೆ.

ರಾಜಧಾನಿಯ ವಾತಾವರಣ : ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಲಿದೆ. ನಗರದಲ್ಲಿ 28.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೆಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.



Exit mobile version