ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ 2024-25ನೇ ಸಾಲಿನ 14ನೇ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಭಾನುವಾರ ಪಡೀಲಿನ ಬೈರಾಡಿಕೆರೆ ಹತ್ತಿರದ ಸಂಘದ ಪ್ರಧಾನ ಕಛೇರಿ “ಆತ್ಮಶಕ್ತಿ ಸೌಧ”ದ ಸಭಾಂಗಣದಲ್ಲಿ ಜರುಗಿತು.


ಸಂಘದ 2024-25ನೇ ಸಾಲಿನ ವಾರ್ಷಿಕ ವರದಿ ಲೆಕ್ಕಪತ್ರವನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್ರವರು ಸಭೆಯಲ್ಲಿ ಮಂಡಿಸಿದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ರವರು ಮಾತನಾಡಿ ಸಂಘವು ಪ್ರಸ್ತುತ ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು 33 ಶಾಖೆಗಳನ್ನು ಹೊಂದಿದ್ದು, 2025-26ನೇ ಸಾಲಿನಲ್ಲಿ ಸಂಘದ ಕಾರ್ಯವ್ಯಾಪ್ತಿಯಲ್ಲಿ ಇನ್ನೂ ಹೆಚ್ಚಿನ ಹೊಸ ಶಾಖೆಗಳನ್ನು ತೆರೆದು, ಹೆಚ್ಚಿನ ಸದಸ್ಯರನ್ನು ಸೇರ್ಪಡೆಗೊಳಿಸಿ ಪಾಲು ಬಂಡವಾಳವನ್ನು ರೂ. 2.5 ಕೋಟಿಗೆ ಹೆಚ್ಚಿಸಿ, ವಿವಿಧ ಯೋಜನೆಗಳ ಮೂಲಕ ಸದಸ್ಯರಿಂದ ರೂ.300 ಕೋಟಿಗೂ ಮಿಕ್ಕಿ ಠೇವಣಿಗಳನ್ನು ಸಂಗ್ರಹಿಸಿ, ರೂ. 240 ಕೋಟಿಗೂ ಮಿಕ್ಕಿ ಸಾಲ ನೀಡುವ ಗುರಿಯನ್ನು ಹೊಂದಿದೆ ಎಂದರು.
ಇಂದು ನಮ್ಮ ಸಂಘದ ಪ್ರಗತಿಗೆ ಸದಸ್ಯರಾದ ತಾವುಗಳು ಕಾರಣ ನಿಮ್ಮ ಸಂಪೂರ್ಣ ಸಹಕಾರಕ್ಕೆ ನಾವುಗಳು ಸದಾ ಋಣಿಯಾಗಿ ಇರುತ್ತೇವೆ. ಅದೇ ರೀತಿ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ ಎಲ್ಲಾ ಸಿಬ್ಬಂದಿವರ್ಗದ ಕಾರ್ಯವೈಖರಿಯನ್ನು ಮುಕ್ತ ಕಂಠದಿಂದ ಶ್ಲಾಘನೆ ಮಾಡಿದರು. ಮುಂದಕ್ಕೆ ಸಂಘವು ಹಾಕಿಕೊಂಡಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಎಲ್ಲಾ ಸದಸ್ಯರ ಸಹಕಾರ ಕೋರಿದರು. ಸಂಘದ ಅಭೂತಪೂರ್ವ ಪ್ರಗತಿಗೆ ಸಹಕಾರ ನೀಡಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.
ಸಂಘವು ವರದಿ ಸಾಲಿನಲ್ಲಿ ಸದಸ್ಯರಿಂದ ಒಟ್ಟು ರೂ. 158.06 ಲಕ್ಷ ಷೇರು ಬಂಡವಾಳ, ರೂ. 24,635.16ಲಕ್ಷ ಠೇವಣಿಯನ್ನು ಸಂಗ್ರಹಿಸಿದೆ. ವರ್ಷಾಂತ್ಯಕ್ಕೆ ರೂ. 21,525.69 ಲಕ್ಷ ಸಾಲ ನೀಡಲಾಗಿದೆ. ಸಂಘದ ದುಡಿಯುವ ಬಂಡವಾಳ ರೂ. 26,108.84 ಲಕ್ಷ ಹೊಂದಿದೆ. ವರದಿ ವರ್ಷಕ್ಕೆ ಸಂಘವು ರೂ. 306.32 ಲಕ್ಷ ನಿವ್ವಳ ಲಾಭಗಳಿಸಿರುವುದು ಸಂಘದ ಹೆಗ್ಗಳಿಕೆಯಾಗಿದೆ. ಸಂಘದ ಸದಸ್ಯರಿಗೆ ವರದಿ ಸಾಲಿನಲ್ಲಿ ಶೇ. 15 ಡಿವಿಡೆಂಡ್ ಘೋಷಿಸಲಾಯಿತು.
ಪ್ರಸ್ತುತ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ (ನಿ.) ಬೆಂಗಳೂರು ಇವರಿಂದ ಅತೀ ಹೆಚ್ಚು ಮೊತ್ತದ ಇ-ಸ್ಟಾಂಪಿಂಗ್ ಮುದ್ರಿಸುವ ಪ್ರಶಸ್ತಿಯನ್ನು ಸಂಘ ಪಡೆದಿರುತ್ತದೆ. 71ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ “ಉತ್ತಮ ಸಹಕಾರಿ ಸಂಘ” ಪ್ರಶಸ್ತಿ ಹಾಗೂ ಸದಸ್ಯರ ಬೇಡಿಕೆಗಳನ್ನು ಸಮರ್ಪಕವಾಗಿ ಪೂರೈಸುವುದರ ಜೊತೆಗೆ ಸಂಘದ ಕಾರ್ಯವೈಖರಿಯನ್ನು ಗುರುತಿಸಿ ಸತತ 10 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದಕ್ಕೆ, ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಂಘದ ಸದಸ್ಯರ ಆರೋಗ್ಯದ ಕಾಳಜಿಯಿಂದ ಸತತವಾಗಿ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿರುವುಕ್ಕೆ ಹಾಗೂ ಸಿಬ್ಬಂದಿಗಳ ನಗುಮೊಗದ ಗುಣಮಟ್ಟದ ಸೇವೆಗಳಿಗೆ ಸಭೆಯಲ್ಲಿ ಸದಸ್ಯರು ಹರ್ಷ ವ್ಯಕ್ತಪಡಿಸಿದರು.
ಪ್ರತಿಭಾ ಪುರಸ್ಕಾರ:
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಾಗೂ ಗೌರವಾನ್ವಿತ ಸ್ಥಾನ ಅಲಂಕರಿಸಿದ ಸಂಘದ ಸದಸ್ಯರಾದ ಡಾ. ಜಿ . ಆರ್. ರಾಧಾಕೃಷ್ಣ ಮೂರ್ತಿ, ಶ್ರೀಮತಿ ಗೀತಾಂಜಲಿ ಎಮ್. ಸುವರ್ಣ, ಕೃಷ್ಣಪ್ಪ ಗೌಡ ಪಡ್ಡಂಬೈಲು, ಚಂದ್ರಶೇಖರ್ ಕುಮಾರ್, ದಯಾನಂದ ಅಡ್ಯಾರ್, ಜನಾರ್ಧನ್ ಅತ್ತಾವರ್, ಸತೀಶ್ ಕುಮಾರ್, ಗೋಪಾ¯ ಪೂಜಾರಿ, ರವಿ ಪೂಜಾರಿ, ಉಮ್ಮಪ್ಪ ಪೂಜಾರಿ, ಭಗವಾನ್ ದಾಸ್, ಶ್ರೀಮತಿ ಪ್ರಮೀಳ, ನವೀನ್ ಕುಮಾರ್, ಶೋಹನ್ ಅತಿಕಾರಿ, ವಿವೇಕ್ ಪೂಂಜ, ಪ್ರಭಾಕರ್ ಅಮೀನ್, ಗೋಪಾಲ್ ಕೊಂಡಾಣ, ನಾಗೇಶ್ ಪೂಜಾರಿ ರವರನ್ನು ಸಂಘದ ಪರವಾಗಿ ಗೌರವಿಸಲಾಯಿತು.
ವಿವಿಧ ಕ್ಷೇತ್ರಗಳಲ್ಲಿಸಾಧನೆ ಮಾಡಿದ ಬಹುಮುಖ ಪ್ರತಿಭೆಯಾಗಿರುವ ಸಂಘದ ಸದಸ್ಯರ ಮಕ್ಕಳಾದ ಕುಮಾರಿ ವೃಷಿಕ ಸಿ ಬೋಳಾರ್, ಕುಮಾರಿ ಅನ್ವಿಕ್ಷಾ, ಕುಮಾರಿ ಶ್ರೀರಕ್ಷ ಎಸ್.ಎಚ್ ಪೂಜಾರಿ, ಕುಮಾರಿ ಹರ್ಷಿತ, ಕುಮಾರಿ ಯಾನ ಪಿ ಬಂಗೇರ, ಕುಮಾರಿ ಟಿಶಾ ಪ್ರಶಾಂತ್, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆಗೈದ ಸಂಘದ ಸದಸ್ಯರ ಮಕ್ಕಳಾದ ಕುಮಾರಿ ಶ್ರೀಲತಾ, ಕುಮಾರಿ ಮಾನ್ಯ, ಕುಮಾರಿ ನಿಶ್ಮಾ ಕೆ ಎಮ್, ಕುಮಾರಿ ದಿಯಾ ಮೆಲಿಟಾ ಪಿಂಟೋ, ದೃವ್ ಪಿ ಕರ್ಕೇರ, ಕುಮಾರಿ ಲಹರಿ ಎಮ್ ಆರ್, ಕುಮಾರಿ ಚರಣ್ಯ, ಕುಮಾರಿ ಸಾಹಿತ್ಯ ಯು ಕೆ, ಕುಮಾರಿ ಸಾನ್ವಿ ಕೆ ಸುವರ್ಣ, ನವನೀತ್ ಆರ್, ಕುಮಾರಿ ಸೌಜನ್ಯ, ಓಂಕಾರ್ ಎನ್ ಪೂಜಾರಿ, ಡಿಯೋನ ರೆಜಿನ ಡಿಸೋಜ, ಚಾರ್ವಿ ಆರ್, ಆದಿತ್ಯ ಆರಿಗ, ಕುಮಾರಿ ಕೆ ಎಮ್ ಅಸೀಮ ತನ್ಸೀಮ್, ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಸಾಧನೆಗೈದ ಕುಮಾರಿ ಆತ್ಮಿ ಕೆ, ಕುಮಾರಿ ಪ್ರಣಮ್ಯ, ಹಿಮಾಂಶ್ ಕೆ ಅಮಿನ್, ಕುಮಾರಿ ಕನೀಕ್ಷ ಆರ್ ಶೆಟ್ಟಿ, ಕುಮಾರಿ ವಿಭಾ ವಿ ಭಟ್ನಗರ್, ಕುಮಾರಿ ಸಂಜನಾ ಶೆಟ್ಟಿ, ಕುಮಾರಿ ಮೇಘನಾ ಎಸ್, ಕುಮಾರಿ ನಿಕಿತಾ ಶೇಟ್, ಕುಮಾರಿ ಪೂರ್ವಿ ಪುರುಷೋತ್ತಮ್, ನಿಶಾಂತ್ ರೈ, ಪ್ರಕ್ಯಾತ್ ರವರನ್ನು ಈ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.
ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಘದ ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ, ಆನಂದ್ ಎಸ್ ಕೊಂಡಾಣ, ಸೀತಾರಾಮ್ ಎನ್, ರಮಾನಾಥ್ ಸನಿಲ್, ಮುದ್ದು ಮೂಡುಬೆಳ್ಳೆ, ಬಿ.ಪಿ. ದಿವಾಕರ್, ಗೋಪಾಲ್ ಎಮ್. ಶ್ರೀಮತಿ ಚಂದ್ರಾವತಿ, ಶ್ರೀಮತಿ ಉಮಾವತಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ರವರು ಸ್ವಾಗತಿಸಿ, ಉಪಾಧ್ಯಕ್ಷರಾದ ನೇಮಿರಾಜ್ ಪಿ. ರವರು ವಂದಿಸಿದರು. ಅಭಿನಂದನಾ ಪುರಸ್ಕಾರ ಕಾರ್ಯಕ್ರಮವನ್ನು ಸಹಾಯಕ ಪ್ರಬಂದಕರಾದ ವಿಶ್ವನಾಥ ರವರು ನಿರೂಪಿಸಿದರು.

