
ಮಂಗಳೂರು: ಇಂದಿನ ಆಧುನಿಕ ಯುಗದಲ್ಲಿ ಸೊಸೈಟಿಯ ಕಾರ್ಯಭಾರವನ್ನು ಅತಿ ಶೀಘ್ರದಲ್ಲಿ ಪ್ರತಿಯೊಬ್ಬ ಸದಸ್ಯರು ತಿಳಿದುಕೊಳ್ಳಲು ವೆಬ್ಸೈಟ್ ಸಹಕಾರಿಯಾಗಲಿದೆ ಎಂದು ಶಿಕ್ಷಕರ ಸಹಕಾರಿ ಸಂಘದ ಅಧ್ಯಕ್ಷರಾದ ಕೆ. ಎಂ. ಕೆ. ಮಂಜನಾಡಿ ಹೇಳಿದರು.
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಶಿಕ್ಷಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ವೆಬ್ಸೈಟ್ ಅನ್ನು ಅನಾವರಣಗೊಳಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ಉಪಾಧ್ಯಕ್ಷರಾದ ಉದಯಕುಮಾರ್, ಕಾರ್ಯನಿರ್ವಹಣಾಧಿಕಾರಿ ಶರ್ಮಿಳ ಹಾಗೂ ಸಂಘದ ಎಲ್ಲಾ ನಿರ್ದೇಶಕರುಗಳು ಮತ್ತು ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.