ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ 14ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಪ್ರಯುಕ್ತ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣಾ ಶಿಬಿರವು “ಆತ್ಮಶಕ್ತಿ ಸೌಧ” ಬೈರಾಡಿಕೆರೆ ಹತ್ತಿರ, ಪಡೀಲ್ ಮಂಗಳೂರು ಇಲ್ಲಿ ಜರುಗಿತು .
ಈ ಕಾರ್ಯಕ್ರಮವನ್ನು ಸಂಘದ ಸದಸ್ಯರಾದ ಜೋಸೆಪ್ ತಿಯೋದರ್ ರವರು ಉದ್ಘಾಟಿಸಿದರು.
ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಇದರ ವೈದ್ಯರಾದ ಡಾ. ಪ್ರವೀಣ್ ಜೋಡಳ್ಳಿ ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರ ಮುಂದಾಳತ್ವದಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ, ಜನರಿಗೆ ಆರೋಗ್ಯದ ಬಗ್ಗೆ ಕಾಳಜಿ ಹಾಗೂ ಜಾಗೃತಿಯನ್ನು ಮೂಡಿಸುತ್ತಾ ಬರುತ್ತಿದೆ. ಶಿಬಿರದಲ್ಲಿ ಲಭ್ಯವಿರುವ ಎಲ್ಲಾ ವೈದ್ಯಕೀಯ ಸೇವೆಗಳ ಸದುಪಯೋಗ ಪಡೆಯುವಂತೆ ವಿನಂತಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ವಾರ್ಷಿಕ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬರುತ್ತಿದೆ. ಇವತ್ತಿನ ಈ ಶಿಬಿರವು ಸಂಘದ ಸದಸ್ಯರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಿಂದ ಸಂಘದ ಸದಸ್ಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಹಬ್ಬಗಳ ಪ್ರಯುಕ್ತ ನಿರಖು ಠೇವಣಿಯ ಮೇಲೆ ವಿಶೇಷ ಬಡ್ಡಿ ದರ ಶೇ. 10.5 ನ್ನು ನೀಡಲಾಗುತ್ತಿದ್ದು ಹಾಗೂ ಗ್ರಾಹಕರಿಗೆ ಯಾವುದೇ ಸೇವಾ ಶುಲ್ಕವಿಲ್ಲದೇ ಪ್ರತಿ ಗ್ರಾಂ ಗೆ ಗರಿಷ್ಟ ಚಿನ್ನಾಭರಣ ಸಾಲವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು. ಹಾಗೆಯೇ ಶಿಬಿರದ ಯಶಸ್ಸಿಗೆ ಸಹಕರಿಸಿರುವ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಇವರ ಆಡಳಿತ ವರ್ಗ ಹಾಗೂ ವೈದ್ಯರ ತಂಡದವರಿಗೆ ಧನ್ಯವಾದಗಳನ್ನು ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ಜಿ. ಪರಮೇಶ್ವರ ಪೂಜಾರಿ, ಆನಂದ್ ಎಸ್ ಕೊಂಡಾಣ, ಸೀತಾರಾಮ್ ಎನ್, ರಮಾನಾಥ್ ಸನಿಲ್, ಮುದ್ದು ಮೂಡುಬೆಳ್ಳೆ, ಬಿ.ಪಿ. ದಿವಾಕರ್, ಗೋಪಾಲ್ ಎಮ್. ಶ್ರೀಮತಿ ಚಂದ್ರಾವತಿ, ಶ್ರೀಮತಿ ಉಮಾವತಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಇದರ ವೈದ್ಯರಾದ ಡಾ. ಅನಘ, ಡಾ. ಸೌಮ್ಯ, ಡಾ. ಸಮೀಪ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಾಖಾಧಿಕಾರಿಯಾದ ಶ್ರೀಮತಿ ಧನಲಕ್ಷ್ಮೀ ರವರು ನಿರೂಪಿಸಿದರು.