ಮಂಗಳೂರು : ದಸರಾ ಮುಗಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಮಾರ್ಗಸೂಚಿಯಂತೆ ಕೆಂಪುಕಲ್ಲು ತೆಗೆಯಲು ಅವಕಾಶ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂಪುಕಲ್ಲಿಗೆ ಸಂಬಂಧಿಸಿದಂತೆ ಈಗಾಗಲೇ ಮಾರ್ಗಸೂಚಿ ಹೊರಡಿಸಲಾಗಿದೆ.
ಜಿಲ್ಲಾಧಿಕಾರಿ ಈ ಬಗ್ಗೆ ಅಂತಿಮ ನಿರ್ದೇಶನಗಳನ್ನು ನೀಡಲಿದ್ದಾರೆ. ಬಳಿಕ ಕೆಂಪುಕಲ್ಲು ಜನರಿಗೆ ಸಿಗಲಿದೆ. ನಾನ್ ಸಿಆರ್‌ಝಡ್ ಮರಳು ಪಡೆಯಲು ಟೆಂಡರ್ ಮೂಲಕ ತೆಗೆಯಲು ಅವಕಾಶ ಮಾಡಿಕೊಡಲಾಗಿದೆ. ಸಿಆರ್‌ಝಡ್ ಮರಳು ವಿಚಾರ ಕೇಂದ್ರದ ನಿರ್ಧಾರದ ಮೇಲೆ ಅವಲಂಬಿತವಾಗಿದೆ ಎಂದು
ಸ್ಪಷ್ಟಪಡಿಸಿದ್ದಾರೆ.