Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಾಟೆಕಲ್ ಶಾಖೆಯ ವತಿಯಿಂದ ಕಿನ್ಯಾದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

UllalaVaniBy UllalaVaniOctober 7, 2025Updated:October 7, 2025No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ನಾಟೆಕಲ್ ಶಾಖೆಯ ಆರನೇ ವಾರ್ಷಿಕೋತ್ಸವದ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನ (ರಿ.) ಬೆಳರಿಂಗೆ ಕಿನ್ಯ ಇವರ ಸಹಯೋಗದೊಂದಿಗೆ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನದ ಆವರಣದಲ್ಲಿ ಜರುಗಿತು.

ಶ್ರೀ ಮಲರಾಯ ಧೂಮಾವತಿ ಬಂಟ ದೈವಗಳ ಭಂಡಾರಮನೆ, ಕಿನ್ಯಾ ಬೆಳರಿಂಗೆ ಇದರ ಅರ್ಚಕರಾದ ರವಿ ಪೂಜಾರಿ ಹಾಗೂ ಅರ್ಚಕ ಪಾತ್ರಿಯಾದ ಕಿಶೋರ್ ಪೂಜಾರಿ ಯವರು ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವನ್ನು ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿಯ ದಂತ ವೈದ್ಯರಾದ ಡಾ| ಇಮ್ರಾನ್ ಪಾಷಾರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ಮಾರ್ಗದರ್ಶನದಲ್ಲಿ ಹಾಗೂ ಸಂಘದ ಸಹಯೋಗದೊಂದಿಗೆ ಯೆನಪೋಯ ಆಸ್ಪತ್ರೆಯು ಹಲವಾರು ಉಚಿತ ಶಿಬಿರಗಳನ್ನು ಆಯೋಜನೆ ಮಾಡುತ್ತಾ ಬರುತ್ತಿದೆ. ಈ ಶಿಬಿರದಲ್ಲಿ ಉಚಿತ ದಂತ ತಪಾಸಣೆ, ಹಲ್ಲನ್ನು ಕೀಳುವುದು, ಹಲ್ಲನ್ನು ಸ್ವಚ್ಚಗೊಳಿಸುವುದು, ಹಾಗೂ ಹುಳುಕು ಹಲ್ಲುಗಳ ಭರ್ತಿ ಮಾಡಲಾಗುವುದಲ್ಲದೇ, ಈ ಶಿಬಿರದಲ್ಲಿ ಅನೇಕ ಸೇವೆಗಳು ಲಭ್ಯವಿದ್ದು, ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ ಮಂಗಳೂರು ಇದರ ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ ಜೆ.ಸಿ ನಾಯಕ್ ರವರು ಮಾತನಾಡಿ “ಯಾವುದೇ ಮುಜುಗರ ತೋರಿಸದೆ ನಿಮ್ಮ ಆರೋಗ್ಯ ತಪಾಸಣೆಯನ್ನು ಮಾಡಿಸಿ ಆರೋಗ್ಯದಿಂದಿರಿ. ರೋಗ ಬಂದಿರುವವರು ಮಾತ್ರ ಚಿಕಿತ್ಸೆ ಪಡೆಯುವುದಲ್ಲದೇ, ರೋಗ ಬರುವ ಮುಂಚಿತವಾಗಿ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಿಕೊಂಡು ಇಂತಹ ಶಿಬಿರಗಳಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ತುಂಬಾ ಅತ್ಯಗತ್ಯ” ಎಂದು ಶುಭ ಹಾರೈಸಿದರು.

ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನ (ರಿ.) ಇದರ ಸ್ಥಾಪಕಾಧ್ಯಕ್ಷರಾದ ಜಯಂತ ಎಮ್ ಪೂಜಾರಿ ಯವರು ಮಾತನಾಡಿ “ಕೆಲಸದ ಒತ್ತಡ ಹಾಗೂ ದೈನಂದಿನ ಕಾರ್ಯಚಟುವಟಿಕೆಗಳಿಂದ ನಮ್ಮ ಆರೋಗ್ಯದತ್ತ ಗಮನ ಹರಿಸಲು ಸಾಧ್ಯವಾಗದ ಕಾರಣ ಜೀವನದ ಆರೋಗ್ಯದ ಮೇಲೆ ವ್ಯತಿರುಕ್ತ ಪರಿಣಾಮ ಬೀರುತ್ತದೆ. ಇಂತಹ ಶಿಬಿರಗಳಲ್ಲಿ ತಮ್ಮ ಆರೋಗ್ಯ ತಪಾಸಣೆ ಮಾಡಿದರೆ ಉತ್ತಮ ಜೀವನ ಶೈಲಿ ನಡೆಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ನಮ್ಮ ಊರಿನ ಜನಸಾಮಾನ್ಯರಿಗೆ ಇಂತಹ ಶಿಬಿರಗಳನ್ನು ಆಯೋಜನೆ ಮಾಡಿರುವುದಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನದ ವತಿಯಿಂದ ಧನ್ಯವಾದಗಳನ್ನು ಸಲ್ಲಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ‘ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ ಮಂಗಳೂರು ಇದರ ಆಡಳಿತ ವರ್ಗ , ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
ಹಬ್ಬಗಳ ಪ್ರಯುಕ್ತ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.10.50 ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಅತ್ಯಧಿಕ ಮೌಲ್ಯವನ್ನು ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುತ್ತಿದೆ. ನಮ್ಮ ಎಲ್ಲಾ ಶಾಖೆಗಳಲ್ಲಿ ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋಟೋಕಿಯ, ಜನರಲ್ ಇನ್ಸುರೆನ್ಸ್ ಕಂಪೆನಿ ಮುಂತಾದ ಕಂಪೆನಿಗಳ ವಿಮಾ ಸೌಲಭ್ಯಗಳು ಲಬ್ಯವಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಬೇಕೆಂದು ವಿನಂತಿಸಿದರು.

ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಗೋಪಾಲ್ ಎಮ್., ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನ (ರಿ.) ಇದರ ಅಧ್ಯಕ್ಷರಾದ ಶಿವಪ್ಪ ಪೂಜಾರಿ, ಮಹಾಮ್ಮಯಿ ಮಿತೃ ಮಂಡಳಿ ಬೆಳರಿಂಗೆ ಕಿನ್ಯಾ ಇದರ ಅಧ್ಯಕ್ಷರಾದ ಜಗದೀಶ್ ಪೂಜಾರಿ ಬೆಳರಿಂಗೆ, ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ಇದರ ಸಾರ್ವಜನಿಕ ಸಂಪರ್ಕ ಅಧಿಕಾರಿ ಭರತ್ ಮತ್ತಿತ್ತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು 100ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ, ಉಚಿತ ಕನ್ನಡಕ ವಿತರಣೆ, ದಂತ ತಪಾಸಣೆ ಹಾಗೂ ನೇತ್ರ ತಪಾಸಣೆಯನ್ನು ನಡೆಸಲಾಯಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖಾಧಿಕಾರಿ ಶ್ರೀಮತಿ ಅಕ್ಷತಾ. ಕೆ ಸ್ವಾಗತಿಸಿ, ಸಿಬ್ಬಂದಿಯಾದ ಕುಮಾರಿ ಪವಿತ್ರ ಧನ್ಯವಾದವಿತ್ತರು. ಸಹಾಯಕ ಪ್ರಬಂದಕರಾದ ವಿಶ್ವನಾಥ ರವರು ಕಾರ್ಯಕ್ರಮದ ನಿರೂಪಣೆಯನ್ನು ನಿರ್ವಹಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಜೀವನದಲ್ಲಿ ವಿದ್ಯಾರ್ಥಿಗಳು ಯಶಸ್ಸು ಸಾಧಿಸಬೇಕಾದರೆ ನಿರಂತರ ಪ್ರಯತ್ನ, ಪರಿಶ್ರಮ ಅಗತ್ಯ :  ಪ್ರಶಾಂತ ಕಾಜವ

May 26, 2026

ಮಂಗಳೂರು: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ ಮತ್ತೊರ್ವ ಆರೋಪಿಯ ಬಂಧನ

May 26, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

Comments are closed.

Advertise
ಸಂಪರ್ಕಿಸಿ

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025
suddi

ಮಂಗಳೂರು ನಗರದಲ್ಲಿ ಯೂಟ್ಯೂಬರ್ ಗಳ ಹಾವಳಿ, ಸುದ್ದಿಯ ರಭಸದಲ್ಲಿ ವಿಡಿಯೊದಲ್ಲಿ ಹೇಳಿಕೆ ವಿವಾದ : ಬಿಎನ್‌ಎಸ್ ಸೆಕ್ಷನ್ 196 ಮತ್ತು 353 ಅಡಿಯಲ್ಲಿ ಪ್ರಕರಣ ದಾಖಲು

By UllalaVaniMay 30, 20260

ಮಂಗಳೂರು: ಸಾಮಾಜಿಕ ಜಾಲತಾಣ ಹಾಗೂ ಯೂಟ್ಯೂಬ್‌ ವೇದಿಕೆಗಳಲ್ಲಿ ಪ್ರಸಾರವಾದ ವಿಡಿಯೊದಲ್ಲಿನ ಹೇಳಿಕೆಗಳಿಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 196…

ಮುಡಿಪು : ಭಾರತ್ ಚಿಕನ್ ಸ್ಟಾಲ್ ಮಾಲೀಕ ಹೃದಯಾಘಾತಕ್ಕೆ ಬಲಿ..!

May 30, 2026

ವ್ಯಕ್ತಿತ್ವ ಹಿತರಕ್ಷಣೆ ತಿದ್ದುಪಡಿ ಕಾಯಿದೆ ಇಂದಿನ ಡಿಜಿಟಲ್ ಯುಗದ ಅಗತ್ಯ

May 30, 2026

ಬಿಜೆಪಿಗೆ ಶಾಕ್: ಬೊಳಂತೂರಿನ ಹಿರಿಯ ನಾಯಕ ಈಶ್ವರ್ ಭಟ್ ರಾಕೋಡಿ ಕಾಂಗ್ರೆಸ್ ಸೇರ್ಪಡೆ

May 30, 2026
1 2 3 … 1,939 Next
Automatic YouTube Gallery

ಅಭಿವೃದ್ಧಿಯತ್ತ ಮಾಡೂರು ಶಾಲೆಯ ದಿಟ್ಟಹೆಜ್ಜೆ | ಸ್ವರ್ಣ ಮಹೋತ್ಸವದ ಹೊಸ್ತಿಲಲ್ಲಿದೆ ಮಾಡೂರು ಶಾಲೆ| Ullalavani

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅಭಿವೃದ್ಧಿಯತ್ತ ಮಾಡೂರು ಶಾಲೆಯ ದಿಟ್ಟಹೆಜ್ಜೆ | ಸ್ವರ್ಣ ಮಹೋತ್ಸವದ ಹೊಸ್ತಿಲಲ್ಲಿದೆ ಮಾಡೂರು ಶಾಲೆ| Ullalavani
Now Playing
ಅಭಿವೃದ್ಧಿಯತ್ತ ಮಾಡೂರು ಶಾಲೆಯ ದಿಟ್ಟಹೆಜ್ಜೆ | ಸ್ವರ್ಣ ಮಹೋತ್ಸವದ ಹೊಸ್ತಿಲಲ್ಲಿದೆ ಮಾಡೂರು ಶಾಲೆ| Ullalavani
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾರ್ಮಿಕ ಸಾರಿಗೆ ಮೋಟಾರ್ ವಾಹನ ಭದ್ರತೆ ಮಾಹಿತಿ ಶಿಬಿರ ಹಾಗೂ ನೊಂದಣಿ ಮತ್ತು ಸ್ಮಾರ್ಟ್ ಕಾರ್ಡ್ ವಿತರಣೆ
Now Playing
ಕಾರ್ಮಿಕ ಸಾರಿಗೆ ಮೋಟಾರ್ ವಾಹನ ಭದ್ರತೆ ಮಾಹಿತಿ ಶಿಬಿರ ಹಾಗೂ ನೊಂದಣಿ ಮತ್ತು ಸ್ಮಾರ್ಟ್ ಕಾರ್ಡ್ ವಿತರಣೆ
ತೊಕ್ಕೊಟ್ಟುವಿನಲ್ಲಿ ಕಾರ್ಮಿಕ ಸಾರಿಗೆ ಮೋಟಾರ್ ವಾಹನ ಭದ್ರತಾ ಮಾಹಿತಿ ಶಿಬಿರ, ...
ತೊಕ್ಕೊಟ್ಟುವಿನಲ್ಲಿ ಕಾರ್ಮಿಕ ಸಾರಿಗೆ ಮೋಟಾರ್ ವಾಹನ ಭದ್ರತಾ ಮಾಹಿತಿ ಶಿಬಿರ, ಕಾರ್ಮಿಕರ ನೋಂದಣಿ ಮತ್ತು ಸ್ಮಾರ್ಟ್ ಕಾರ್ಡ್ ವಿತರಣೆ; ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ

ಮ್ಯಾಕೊ ಸೊಸೈಟಿ ಕಾರ್ಯಕ್ಕೆ ಶ್ಲಾಘನೆ

📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version