
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಇವರ ಸಹಯೋಗದಲ್ಲಿ ಇಂದು ವಿಟ್ಲದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ (Under-17) ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕೈರಂಗಳ ಪುಣ್ಯಕೋಟಿನಗರದ ಶಾರದಾಗಣಪತಿ ವಿದ್ಯಾಕೇಂದ್ರ ತಂಡದ ವಿದ್ಯಾರ್ಥಿಗಳು ಅದ್ಭುತ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಈ ವಿಜಯದೊಂದಿಗೆ ತಂಡವು ಮೈಸೂರು ವಿಭಾಗೀಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದು, ಶಾಲೆಯ ತರಬೇತುದಾರ ನಿಖಿಲ್ ಗಟ್ಟಿಯವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಶ್ರಮಪಟ್ಟು ಗೆಲುವು ಸಾಧಿಸಿದ್ದಾರೆ. ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಪೋಷಕರು ತಂಡದ ಈ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

