ಉಳ್ಳಾಲ :ಕಾಪಿಕಾಡ್ ಉಮಾಪುರಿಯ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ 2026ರ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಉಪಸಮಿತಿ ಗಳ ರಚನೆಯ ಬಗ್ಗೆ ವಿಶೇಷ ಸಭೆ ಅ. 12ರಂದು ರವಿವಾರ ಸಂಜೆ 4 ಗಂಟೆಗೆ ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ.
ಶ್ರೀ ಕ್ಷೇತ್ರದಲ್ಲಿ ನಡೆಯುವ ಸಭೆಗೆ ಧಾರ್ಮಿಕ, ಸಾಮಾಜಿಕ ನಾಯಕರು, ವಿವಿಧ ಸಮಾಜಗಳ ಮುಖ್ಯಸ್ಥರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಶ್ರೀ ಉಮಾಮಹೇಶ್ವರಿ ದೇವಸ್ಥಾನ ದ ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನಡೆಯಲು ಸಹಕರಿಸುವಂತೆ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಎ.ಜೆ. ಶೇಖರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
