ಮುದುಂಗಾರುಕಟ್ಟೆ; ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಸಿಡಿಲು ಬಡಿದು ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, , ಸ್ಥಳಕ್ಕೆ ತಜ್ಞರ ತಂಡಗಳಾದ ಸೊಕೊ ತಂಡ, ಶ್ವಾನದಳ ಮತ್ತು ಬೆರಳಚ್ಚು ತಂಡ ಮತ್ತು ಸದರಿ ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮೃತದೇಹವನ್ನು ಪಾತೂರು ಜುಮಾ ಮಸೀದಿ ಸಮೀಪದ ನಿವಾಸಿ ನಿಯಾಫ್ (28) ಎಂಬವರದ್ದಾಗಿದ್ದು, ಈತ ಅ.12 ರಂದು ಸಂಜೆ ಮನೆಯಿಂದ ನಾಪತ್ತೆಯಾಗಿದ್ದನು. ನಿಯಾಫ್ ವರ್ಷದ ಹಿಂದೆ ಮಹಿಳೆಯ ಚಿನ್ನದ ಸರ ಕಿತ್ತು ನಾಪತ್ತೆಯಾದ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಿಂದ ಬಿಡುಗಡೆಗೊಂಡಿದ್ದನು. ಇದೀಗ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
