ಸೋಮೇಶ್ವರದ ಪಿಲಾರುನಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಸಾಯಿಬಾಬಾ ಮಂದಿರ ಅಕ್ಟೋಬರ್ 24ರಂದು ಲೋಕಾರ್ಪಣೆಗೊಳ್ಳಲಿದೆ.


ಅ.23,24,25ರಂದು ವಿವಿಧ ಧಾರ್ಮಿಕ ಪೂಜಾ ಕಾರ್ಯಗಳು ವೇದಮೂರ್ತಿ ದಿನೇಶ್ ಶರ್ಮ ಅವರ ನೇತೃತ್ವದಲ್ಲಿ ಹಾಗೂ ವೇದಮೂರ್ತಿ ವಾಸುದೇವ ಶಾಂತಿ ಇವರ ಗೌರವ ಉಪಸ್ಥಿತಿಯಲ್ಲಿ ನಡೆಯಲಿದ್ದು, ಅ.23ರಂದು ಬೆಳಿಗ್ಗೆ 7ರಿಂದ ಪಂಚಗವ್ಯ, ಸ್ವಸ್ತಿ, ಪುಣ್ಯಾಹ ನಡೆಯಲಿದೆ. ಬೆಳಿಗ್ಗೆ 8ಗಂಟೆಗೆ ಶ್ರೀ ಉಮಾಮಹೇಶ್ವರಿ ದೇವಸ್ಥಾನ ಕಾಪಿಕಾಡ್‌ನ ಆಡಳಿತ ಮೊಕ್ತೇಸರರಾದ ಎ.ಜೆ.ಶೇಖರ್ ಉಗ್ರಾಣ ಮುಹೂರ್ತ ದೀಪವನ್ನು ಬೆಳಗಿಸಲಿದ್ದಾರೆ. ಸಂಜೆ 5ಗಂಟೆಗೆ ಹೊರೆಕಾಣಿಕೆ ಶೋಭಾಯಾತ್ರೆ ನಡೆಯಲಿದ್ದು, ಸಂಜೆ 4ರಿಂದ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿದೆ.
ಅ.24ರಂದು ಬೆಳಿಗ್ಗೆ 5ಗಂಟೆಗೆ ಮಹಾಗಣಪತಿ ಹೋಮ, ಪ್ರತಿಷ್ಠಾಂಗ ಹೋಮ ನಡೆದು ಬೆಳಿಗ್ಗೆ ಗಂಟೆ 8.45ಕ್ಕೆ ಒದಗುವ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ಶ್ರೀ ಸಾಯಿಬಾಬಾ ದೇವರ ಪ್ರತಿಷ್ಠೆ ಕಲಶಾಭಿಷೇಕ ನೆರವೇರಲಿದೆ. ಬೆಳಿಗ್ಗೆ 10 ಗಂಟೆಗೆ ಗಣ್ಯರಿಂದ ದೀಪ ಪ್ರಜ್ವಲನೆ ನಡೆದು, ವಿವಿಧ ಭಜನಾ ಮಂಡಳಿಯವರಿಂದ ಭಜನಾ ಸಕೀರ್ತನೆ ಮೊಳಗಲಿದೆ. ಮಧ್ಯಾಹ್ನ 12ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 2ರಿಂದ ಭಜನಾ ಸಂಕೀರ್ತನೆ ಮೊಳಗಿದ್ರೆ ರಾತ್ರಿ ಗಂಟೆ 7:30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಲಿದೆ.
ಅಕ್ಟೋಬರ್ 25ರಂದು ಬೆಳಿಗ್ಗೆ 6ಗಂಟೆಗೆ ನಿತ್ಯ ಪೂಜೆ, ಪ್ರಾರ್ಥನೆ, ವಿಷ್ಣುಸಹಸ್ರನಾಮ ಪಾರಾಯಣ, ಲಕ್ಷ ತುಳಸಿ ಅರ್ಚನೆ ನಡೆಯಲಿದೆ. ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದು ಮಧ್ಯಾಃನ 2ಗಂಟೆಗೆ ಭಜನಾ ಸಂಕೀರ್ತನೆ ನಡೆದು, ರಾತ್ರಿ 7:30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯುವ ಮೂಲಕ ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮಗಳು ಸಮಾಪನಗೊಳ್ಳಲಿದೆ.
ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಅ.25ರಂದು ಸಂಜೆ 5ಗಂಟೆಗೆ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 7;30ಕ್ಕೆ ಜಗದೀಶ್ ಪುತ್ತೂರು ಇವರಿಂದ ಸಂಗೀತ ಗಾನ ಸಂಭ್ರಮ ಮೇಳೈಸಲಿವೆ.
ತಾವೆಲ್ಲರೂ ಈ ಮೂರು ದಿನಗಳ ಕಾಲ ನಡೆಯಲಿರುವ ಪುಣ್ಯಕಾರ್ಯದಲ್ಲಿ ಭಾಗಿಯಾಗುವಂತೆ ಸಮಿತಿಯು ವಿನಂತಿಸಿಕೊಂಡಿದೆ.





