ಮಂಗಳೂರು ; ಮಂಗಳೂರು ತಾಲೂಕಿನ ಸೂರಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆಯ ಆಯ್ದ ಭಾಗಗಳಲ್ಲಿ ಹಾಳಾಗಿರುವ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಮೂಲ್ಕಿ-ಮೂಡಬಿದಿರೆ ಶಾಸಕರಾದ ಉಮಾನಾಥ್ ಕೋಟ್ಯಾನ್ ಇಂದು ಶಿಲಾನ್ಯಾಸ ನೆರವೇರಿಸಿದ್ದಾರೆ.
ಲೋಕೋಪಯೋಗಿ ಇಲಾಖೆಯ 1ಕೋಟಿ 50 ಲಕ್ಷ ರೂಪಾಯಿ ಅನುದಾನದಲ್ಲಿ ರಸ್ತೆಯ ಅಭಿವೃದ್ಧಿ ಕಾಮಗಾರಿ ನಡೆಯಲಿದೆ.