ಉಪ್ಪಿನಂಗಡಿ, ಬಂಟ್ವಾಳ ಮತ್ತು ಬೆಳ್ತಂಗಡಿ ಠಾಣೆಗಳಲ್ಲಿ ಕರ್ನಾಟಕ ಜಾನುವಾರು ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020ರಡಿ ದಾಖಲಾಗಿರುವ ಪ್ರತ್ಯೇಕ ಪ್ರಕರಣಗಳಲ್ಲಿ ವಾಸದ ಮನೆ ಹಾಗೂ ಕಟ್ಟಡವೊಂದರ ಮುಟ್ಟುಗೋಲಿಗಾಗಿ ಪೊಲೀಸರು ಉಪವಿಭಾಗದ ದಂಡಾಧಿಕಾರಿಯವರಿಗೆ ವರದಿ ಸಲ್ಲಿಸಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ(ಅ.ಕ್ರ.76/2025) sec:331(4), 305 ಬಿಎನ್‌ಎಸ್, 2023 00:4,12 ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020ರಲ್ಲಿ ತನಿಖೆಯ ಸಮಯ ಆರೋಪಿ ಮೊಹಮ್ಮದ್ ಮನ್ಸೂರ್ ಎಂಬಾತ ವಧೆ ಮಾಡಿ ಮಾಂಸವನ್ನು ಮಾರಾಟ ಮಾಡುತ್ತಿದ್ದ ಸ್ಥಳವಾದ ಮಂಗಳೂರು ನಗರ ವ್ಯಾಪ್ತಿಯ ಜೆ.ಎಮ್ ರಸ್ತೆ ಭಟ್ಕಳ ಬಜಾರ್ ಬಂದರ್ ಕುದ್ರೋಳಿ ಬಳಿಯಿರುವ ಕಟ್ಟಡವನ್ನು ಕಲಂ 8(1)ರ ಪ್ರಕಾರ ತನಿಖಾಧಿಕಾರಿಯವರು ಜಪ್ತಿ ಮಾಡಿಕೊಂಡು ಮುಟ್ಟುಗೋಲಿಗಾಗಿ ಮಂಗಳೂರು ಉಪವಿಭಾಗದ ದಂಡಾಧಿಕಾರಿಯವರಿಗೆ ವರದಿ ಮಾಡಿದ್ದಾರೆ.

