Site icon Ullalavani

ಕರಾವಳಿ, ಮಲೆನಾಡಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ; ರಾಜ್ಯದ 7 ಜಿಲ್ಲೆಗಳಲ್ಲಿ `ಆರೆಂಜ್ ಅಲರ್ಟ್’

ಬೆಂಗಳೂರು, ಅ.22: ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ಜನರಿಗೆ ಮಳೆ ಕೊಂಚ ಅಡ್ಡಿಯಾಗುತ್ತಿದೆ. ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.


ಕಡಲನಗರಿಯಲ್ಲಿ ವರುಣಾರ್ಭಟ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆ ಜೊತೆ ಗಾಳಿಯ ವೇಗ ಗಂಟೆಗೆ 35-45 ಕಿ.ಮೀ. ಇರುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಘೊಷಿಸಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಬಳ್ಳಾರಿ ಮತ್ತು ವಿಜಯನಗರದಲ್ಲಿ ಮೋಡ ಕವಿದ ವಾತಾವಣರಣ ಅಥವಾ ತುಂತುರು ಮಳೆಯ ನಿರೀಕ್ಷೆ ಇದೆ.

ರಾಜಧಾನಿ ಬೆಂಗಳೂರಲ್ಲಿ ಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಗಾಳಿಯ ವೇಗ ಗಂಟೆಗೆ 11-20 ಕಿ.ಮೀ. ಇರಲಿದೆ ಎಂದು ಹವಾವಾನ ಇಲಾಖೆ ತಿಳಿಸಿದೆ.

Exit mobile version