Site icon Ullalavani

ಏಕಾಏಕಿ ಬೈಕ್ ಸವಾರನಿಗೆ ಎದುರಾದ ಚಿರತೆ..!

ಉಡುಪಿ,ಅ.23: ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂಚಾರ್‌ನಲ್ಲಿ ಚಿರತೆಯೊಂದು ಚಲಿಸುತ್ತಿದ್ದ ಬೈಕ್‌ಗೆ ಅಡ್ಡ ಬಂದ ಪರಿಣಾಮ ಸವಾರ ನಿಯಂತ್ರಣ ತಪ್ಪಿ ಚಿರತೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.

ಘಟನೆಯಲ್ಲಿ ಚಿರತೆ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ನಂಚಾರ್ ಭಾಸ್ಕರ್ ಶೆಟ್ಟಿ ಅವರು ಗಂಭೀರ ಗಾಯಗೊಂಡಿದ್ದಾರೆ. ಭಾಸ್ಕರ್ ಶೆಟ್ಟಿ ರಾತ್ರಿ ತನ್ನ ಬೈಕ್‌ನಲ್ಲಿ ಮನೆಗೆ ಬರುತ್ತಿದ್ದ ವೇಳೆ ಒಮ್ಮೆಲೇ ಚಿರತೆಯೊಂದು ಅಡ್ಡ ಬಂದ ಪರಿಣಾಮ ಸವಾರ ನಿಯಂತ್ರಣ ತಪ್ಪಿ ಚಿರತೆಗೆ ಡಿಕ್ಕಿ ಹೊಡೆದು ಬೈಕ್ ಪಲ್ಟಿಯಾಗಿದೆ.

ಗಾಯಾಳು ಬೈಕ್ ಸವಾರನನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಹೆಬ್ರಿ ಅರಣ್ಯ ಇಲಾಖೆಯವರು ಸ್ಥಳಕ್ಕಾಗಮಿಸಿ ಮೃತಪಟ್ಟ ಚಿರತೆಯನ್ನು ಪರಿಶೀಲಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version