ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಉಳ್ಳಾಲ : ಮಂಗಳೂರು ಶಿಕ್ಷಕರ ಸಹಕಾರಿ ಕ್ರೆಡಿಟ್ ಸಂಘ, ನಿಯಮಿತ ಮಂಗಳೂರು ಇದರ ಪ್ರಾಯೋಜಿತ ಸಂಸ್ಥೆಯಾದ ಶಿಕ್ಷಕರ ಸೇವಾ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ಮಂಗಳೂರಿನ ಮಹಿಳಾ ಶಿಕ್ಷಕ ಶಿಕ್ಷಣಾ ತರಬೇತಿ ಸಂಸ್ಥೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾನದ ಅಧ್ಯಕ್ಷೆ ರತ್ನಾವತಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಅಧೀಕ್ಷಕಿ ಉಷಾ, ಮಂಗಳೂರು ಶಿಕ್ಷಕರ ಸಹಕಾರಿ ಕ್ರೆಡಿಟ್ ಸಂಘದ ಅಧ್ಯಕ್ಷ ಅಲೋಶಿಯಸ್ ಡಿ’ಸೋಜ ಉಪಸ್ಥಿತರಿದ್ದರು.
ಪ್ರತಿಷ್ಠಾನದಿಂದ ಪ್ರಾಥಮಿಕ, ಪ್ರೌಢ ಹಾಗೂ ಪ.ಪೂರ್ವ ಕಾಲೇಜಿನ ಸುಮಾರು 123 ವಿದ್ಯಾರ್ಥಿಗಳಿಗೆ ರೂ. 78,400 ವಿತರಿಸಲಾಯಿತು.
ಪ್ರತಿಷ್ಠಾನದ ಅಧ್ಯಕ್ಷೆ ರತ್ನಾವತಿ ಸ್ವಾಗತಿಸಿದರು. ಹಿರಿಯರಾದ ಎ. ಸದಾಶಿವ ಪ್ರಸ್ತಾವನೆಗೈದರು. ಕಾರ್ಯಕಾರಿ ಸಮಿತಿ ಸದಸ್ಯೆ ರವಿಕಲಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಉಪಾಧ್ಯಕ್ಷೆ ಮಹಾಲಕ್ಷ್ಮೀ ವಂದಿಸಿದರು.




