Site icon Ullalavani

ಹೈದರಾಬಾದ್- ಬೆಂಗಳೂರು ಖಾಸಗಿ ಬಸ್ ಬೆಂಕಿಗಾಹುತಿ; 20 ಪ್ರಯಾಣಿಕರು ಸಜೀವ ದಹನ

ಬಳ್ಳಾರಿ, ಅ.24: ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಹೊತ್ತಿ ಉರಿದಿದ್ದು, 20 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.

ಬಸ್‌ನಲ್ಲಿ ಒಟ್ಟು 40ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಕರ್ನೂಲು ಹೊರವಲಯದಲ್ಲಿ ಚಿನ್ನಟಕೂರು ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಹೈದರಾಬಾದ್ ನಿಂದ ಬೆಂಗಳೂರು ಕಡೆ ಬರುತ್ತಿದ್ದ ಓಲ್ವೋ ಬಸ್ ಬೆಂಕಿಗಾಹುತಿಯಾಗಿದ್ದು, ಬಸ್‌ನಲ್ಲಿದ್ದ 40 ಪ್ರಯಾಣಿಕರ ಪೈಕಿ ಇಪ್ಪತ್ತು ಜನರ ಸಾವನ್ನಪ್ಪಿದ್ದಾರೆ. ಬೈಕ್ ಮತ್ತು ಬಸ್ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಬಸ್ಸಿನ ಕೆಳಭಾಗದಲ್ಲಿ ಸಿಲುಕಿಕೊಂಡಿದೆ. ಈ ವೇಳೆ
ಡಿಸೇಲ್ ಟ್ಯಾಂಕರ್ ಡ್ಯಾಮೇಜ್ ಆದ ಹಿನ್ನೆಲೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆರಂಭದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಬೆಂಕಿ ಹತ್ತಿಕೊಂಡಿದೆ ಎಂದು ಕೊಂಡಿದ್ದ ಡ್ರೈವರ್, ನಂತರ ಪ್ರಯಾಣಿಕರನ್ನು ಎಬ್ಬಿಸಿದ್ದಾರೆ. ಅಷ್ಟರಲ್ಲಾಗಲೇ ದೊಡ್ಡ ಮಟ್ಟದಲ್ಲಿ ಬೆಂಕಿ ಹತ್ತಿಕೊಂಡಿದೆ. ಶೇಕಡಾ 90ರಷ್ಟು ಬಸ್ ಸುಟ್ಟಕರಕಲಾಗಿದೆ. ಇಬ್ಬರು ಡ್ರೈವರ್‌ಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Exit mobile version