ಬೆಂಗಳೂರು, ಅ,24: ವಿಧಾನಸೌಧದಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 66 ನೇ ಸಭೆ, ಬಂಡವಾಳ ಹೂಡಿಕೆ ಉತ್ತೇಜನಕ್ಕೆ ಸಮಗ್ರ ಏಕಗವಾಕ್ಷಿ ವ್ಯವಸ್ಥೆ ಮತ್ತು ವ್ಯಾಪಾರ ಒಪ್ಪಿಗೆ ನೀಡಿಕೆ ವ್ಯವಸ್ಥೆಯ ಸರಳೀಕರಣ ಕುರಿತ ಸಭೆ ನಡೆಯಿತು.
ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಎಚ್ ಕೆ ಪಾಟೀಲ್, ಕೆ ಜೆ ಜಾರ್ಜ್, ಎಂ ಬಿ ಪಾಟೀಲ್, ಪ್ರಿಯಾಂಕ್ ಖರ್ಗೆ, ಎಂ ಸಿ ಸುಧಾಕರ್, ಸಂತೋಷ್ ಲಾಡ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.