ದೇರಳಕಟ್ಟೆ,ಅ.24; ಬೆಳ್ಮಗ್ರಾಮ ಪಂಚಾಯತ್ ವ್ಯಾಪ್ತಿಯ ಕೆ.ಎಸ್.ಹೆಗ್ಡೆ ಆಸ್ಪತ್ರೆ ಪ್ರವೇಶ ದ್ವಾರದ ಬಳಿ ವಾಣಿಜ್ಯ ಕಟ್ಟಡಗಳಿಂದ ಬರುವ ಮಲಮೂತ್ರ ನೀರು ಸಂಗ್ರಹವಾಗುತ್ತಿದ್ದು, ದುರ್ವಾಸನೆಯಿಂದ ಸಾರ್ವಜನಿಕರು ತೀವ್ರ ತೊಂದರೆಗೊಳಗಾಗಿದ್ದಾರೆ.
ಈ ಕುರಿತು ಆರೋಗ್ಯ ಇಲಾಖೆಗೆ ದೂರು ಸಲ್ಲಿಸಲಾಗಿದ್ದು, ಆರೋಗ್ಯ ಅಧಿಕಾರಿಗಳು ಸ್ಥಳ ತನಿಖೆ ನಡೆಸಿ ಕೋಟೆಕಾರು ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಆದರೆ, ಸಮಸ್ಯೆಗೆ ಇನ್ನೂ ಶಾಶ್ವತ ಪರಿಹಾರ ಕಂಡುಬಂದಿಲ್ಲ.
ಸ್ಪೀಕರ್ ಯು.ಟಿ.ಖಾದರ್ ಕ್ಷೇತ್ರದಲ್ಲಿ ತ್ಯಾಜ್ಯ ನಿರ್ವಹಣೆ ಸರಿಯಾಗಿ ನಡೆಯದಿರುವುದು ಮತ್ತು ದೂರುಗಳಿಗೆ ಅಧಿಕಾರಿಗಳು ಸ್ಪಂದಿಸದಿರುವುದು ನಾಗರಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಬೆಳ್ಮಗ್ರಾಮ ಪಂಚಾಯತ್ ಅಡಳಿತ ಮಂಡಳಿ ಮತ್ತು ಪಿಡಿಒ ಅವರ ಕರ್ತವ್ಯ ಲೋಪದಿಂದ ಸಾರ್ವಜನಿಕರು ಬೇಸತ್ತಿದ್ದಾರೆ. ಈ ಸಮಸ್ಯೆಗೆ ತಕ್ಷಣವೇ ಪರಿಹಾರ ಕಂಡು, ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.