Site icon Ullalavani

“ಸ್ಟಾಪ್ ವೋಟ್ ಚೋರಿ” ಅಭಿಯಾನಕ್ಕೆ ಬೆಂಬಲವಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಕಾರ್ಕಳ ಕಾಂಗ್ರೆಸ್ ಚಾಲನೆ

ಕಾರ್ಕಳ : ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆಸಿದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಲೋಕಸಭಾ ವಿಪಕ್ಷ ನಾಯಕರಾದ ರಾಹುಲ್ ಗಾಂಧಿಯವರು ದೇಶವ್ಯಾಪಿ ನಡೆಸುತ್ತಿರುವ “ಸ್ಟಾಪ್ ವೋಟ್ ಚೋರಿ” ಅಭಿಯಾನಕ್ಕೆ ಬೆಂಬಲವಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಸಹಿ ಹಾಕುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮತದಾನ ದೇಶದ ಪ್ರಜೆಗಳ ಹಕ್ಕು ಆದರೆ ಮತಗಳ್ಳತನದ ಮೂಲಕ ಬಿಜೆಪಿ ‘ಶದ ಜನತೆಗೆ ಅತೀ ದೊಡ್ಡ ದ್ರೋಹವೆಸಗಿದೆ. ಇದರ ವಿರುದ್ದ ನಾವೆಲ್ಲರೂ ಒಂದಾಗಿ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಾಗಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ ರಾವ್ ಮಾತನಾಡಿ, ಬಿಜೆಪಿ ಅಧಿಕಾರಕ್ಕಾಗಿ ಜನರ ಹಕ್ಕನ್ನು ಕಸಿಯುವ ದೇಶ ದ್ರೋಹದ ಕೆಲಸ ಮಾಡಿದೆ ಇದರ ವಿರುದ್ದ ಪ್ರತಿಯೊಬ್ಬ ಪ್ರಜೆಯೂ ಧ್ವನಿ ಎತ್ತಬೇಕು. ಬೂತ್ ಮಟ್ಟದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಎಲ್ಲರೂ ಸಹಕಾರ ನೀಡಬೇಕು. ಅತೀ ಹೆಚ್ಚು ಸಹಿ ಸಂಗ್ರಹ ಮಾಡಿದ ವಾರ್ಡ್ ಸಮಿತಿಗೆ ಪ್ರೋತ್ಸಾಹ ಬಹುಮಾನ ನೀಡಿ ಗೌರವಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ಕೆ.ಎಮ್.ಎಫ್ ನಿರ್ದೇಶಕ ಸುಧಾಕರ ಶೆಟ್ಟಿ ಮುಡಾರು, ಬ್ಲಾಕ್ ಕಾಂಗ್ರೆಸ್ ಉಪಾದ್ಯಕ್ಷರಾದ ಜಾರ್ಜ್ ಕ್ಯಾಸ್ಟಲಿನ್, ಕೆಡಿಪಿ ಸದಸ್ಯ ಕುಕ್ಕುಂದೂರು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರುಕ್ಕಯ್ಯ ಶೆಟ್ಟಿಗಾರ್, ಮನೋಜ್, ಚರಿತ್ರಾ ಭಂಡಾರಿ, ಪ್ರತಿಮಾ ರಾಣೆ, ಶೋಭಾ ರಾಣೆ, ರಜನಿ, ಪರಿಶಿಷ್ಟ ಘಟಕದ ಅಧ್ಯಕ್ಷ ರಾಘವ ಕುಕ್ಕುಜೆ, ರಮೇಶ್ ಕಾರ್ಕಳ ಮೊದಲಾದವರು ಉಪಸ್ಥಿತರಿದ್ದರು.

Exit mobile version