Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮುಡಿಪು ಶಾಖೆಯ ಗ್ರಾಹಕರ ಸಭೆ

UllalaVaniBy UllalaVaniNovember 1, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮುಡಿಪು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಡಿಪು ಶಾಖೆಯ 9ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಮುಡಿಪು ಶಾಖೆಯಲ್ಲಿ ಜರುಗಿತು.
ಕಾರ್ಯಕ್ರಮವನ್ನು ಸಂಘದ ಸದಸ್ಯರಾದ ನವೀನ್ ಚಂದ್ರ, ಕಾಶೀಮ್ ಕೆ, ಶ್ರೀಮತಿ ಕ್ಯಾತರಿನ್ ಡಿಸೋಜ ಹಾಗೂ ದುಶ್ಯಂತ ರವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.


ಸಂಘದ ಸದಸ್ಯರಾದ ನವೀನ್ ಚಂದ್ರ ರವರು ಮಾತನಾಡಿ “ಸಂಘದ ಸಿಬ್ಬಂದಿ ವರ್ಗದವರು ಉತ್ತಮ ರೀತಿಯಲ್ಲಿ ಗ್ರಾಹಕರಿಗೆ ಸೇವೆ ನೀಡುತ್ತಿರುವುದು ಸಂಘದ ಉನ್ನತಿಗೆ ಕಾರಣವಾಗಿದೆ. ಸಂಘವು ಬ್ಯಾಂಕಿಂಗ್ ಸೇವೆಯ ಜೊತೆಗೆ ಸಂಘದ ಸದಸ್ಯರ ಆರೋಗ್ಯದ ಕಾಳಜಿಯಿಂದ ಉಚಿತ ವೈಧ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಇನ್ನು ಹೆಚ್ಚಿನ ಸೇವೆಯನ್ನು ಗ್ರಾಹಕರಿಗೆ ನೀಡುವಂತಾಗಲಿ” ಎಂದು ಆಶಿಸಿದರು.
ಸಂಘದ ಸದಸ್ಯರಾದ ಕಾಸಿಮ್ ಕೆ ಇವರು ಮಾತನಾಡಿ “ಸಂಘವು ಅತೀ ಕಡಿಮೆ ಅವಧಿಯಲ್ಲಿ ಸಾಧಿಸಿರುವ ಬೆಳವಣಿಗೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಇನ್ನೂ ಹೆಚ್ಚಿನ ಶಾಖೆಯನ್ನು ತೆರೆಯುವಂತಾಗಲಿ” ಎಂದು ಶುಭ ಹಾರೈಸಿದರು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ, “ಸಂಘದ ಮುಡಿಪು ಶಾಖೆಯು 9ನೇ ವಾರ್ಷಿಕೋತ್ಸವದ ಸುಸಂದರ್ಭದಲ್ಲಿ ಶಾಖೆಯ ಪ್ರಗತಿಗೆ ಕಾರಣಿಕಾರ್ತರಾದ ಎಲ್ಲಾ ಗ್ರಾಹಕರಿಗೆ ಅಭಿನಂದನೆಯನ್ನು ಸಲ್ಲಿಸಿ, ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ 1೦೦೦ ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 1೦.5೦ ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 1೦,5೦೦/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು. ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ಜೀವ ವಿಮೆ, ಆರೋಗ್ಯ ವಿಮೆ, ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿದ್ದು, ಗ್ರಾಹಕರಿಗೆ ಸ್ಮರ್ಧಾತ್ಮಕ ದರದಲ್ಲಿ ವಿಮಾ ಸೌಲಭ್ಯವನ್ನು ನೀಡುತ್ತಿದ್ದೇವೆ. ಜನರ ಆರೋಗ್ಯದ ಕಾಳಜಿಯಿಂದ ಆರೋಗ್ಯ ಶಿಬಿರವನ್ನು ಸಹ ಸತತವಾಗಿ ವಿವಿಧ ಸಂಘಗಳ ಸಹಯೋಗದೊಂದಿಗೆ ಹಮ್ಮಿಕೊಂಡು ಬರುತ್ತಿದ್ದೇವೆ. ಜೊತೆಗೆ ಸಂಘದ ಸದಸ್ಯರ ಮಕ್ಕಳಿಗೆ ಒಳ್ಳೆಯ ಅಂಕ ಬಂದಾಗ ವಿದ್ಯಾರ್ಥಿ ವೇತನ ನೀಡಿ ಅವರನ್ನು ಪ್ರೋತ್ಸಾಹಿಸುತ್ತಿದ್ದೇವೆ. ಸಂಘದಲ್ಲಿ ಲಭ್ಯವಿರುವ ಪ್ರತಿಯೊಂದು ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು.
ಸಂಘದ ಮುಡಿಪು ಶಾಖೆಯ ಶಾಖಾಧಿಕಾರಿಯಾದ ಕುಮಾರಿ ನಿಶ್ಮಿತಾ ರವರು ಸ್ವಾಗತಿಸಿ, ಪ್ರದೀಪ್ ರವರು ವಂದಿಸಿದರು. ಸಿಬ್ಬಂದಿಯಾದ ಕುಮಾರಿ ದೀಪ್ತಿ ರವರು ಕಾರ್ಯಕ್ರಮ ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026

“ನಾನ್ ವೆಜ್” ತುಳು ಚಲನ ಚಿತ್ರ ಫೆಬ್ರವರಿ 6ರಂದು ತೆರೆಗೆ

January 27, 2026

ಮುಡಿಪುವಿನ ಬಹುಮುಖ ಪ್ರತಿಭೆ ಸ್ವಾತಿ ಸತೀಶ್ ಆತ್ಮಹತ್ಯೆಗೆ ಶರಣು..!

January 24, 2026

Comments are closed.

Advertise
ಸಂಪರ್ಕಿಸಿ

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025

ಕ್ಯಾನ್ಸರ್ ಹಾಗೂ ಸ್ತ್ರೀ ರೋಗ ಜಾಗ್ರತಿ ಅರಿವು

November 11, 2025
suddi

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

By UllalaVaniFebruary 4, 20260

ದೇರಳಕಟ್ಟೆ : ಧನಾತ್ಮಕ ಚಿಂತನೆಯೊAದಿಗೆ ಕೆನರಾ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನನಗೆ ಅಪಾರ ಸಂತೋಷ ಮತ್ತು ಗೌರವದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

February 4, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026
1 2 3 … 1,792 Next
Automatic YouTube Gallery

ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ

ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
Now Playing
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ...
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
Now Playing
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ.. ಸ್ವರ್ಗದತ್ತ ಮಹಿಷಾ ...
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ..

ಸ್ವರ್ಗದತ್ತ ಮಹಿಷಾ ಹೋಗಲು ಇದೇ ಕಾರಣ; ಕಟೀಲು ಅಸ್ರಣ್ಣರಿಂದ ಅದ್ಭುತ ವಿವರಣೆ
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d