ಪಡುಬಿದ್ರಿ : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡುಬಿದ್ರಿ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ನೇತ್ರ ತಪಾಸಣಾ ಶಿಬಿರವು ಯುವವಾಹಿನಿ (ರಿ) ಪಡುಬಿದ್ರಿ ಘಟಕ ಮತ್ತು ಲಯನ್ಸ್ ಕ್ಲಬ್ ಪಡುಬಿದ್ರಿ, ಇವರುಗಳ ಜಂಟಿ ಸಹಯೋಗದೊಂದಿಗೆ ನ.2ರಂದು ಬೆಳಿಗ್ಗೆ 9.3೦ ರಿಂದ ಮದ್ಯಾಹ್ನ 12.30ರ ವರೆಗೆ ಪಡುಬಿದ್ರಿ ಬಿಲ್ಲವ ಸೇವಾ ಸಂಘ (ರಿ.) ಇದರ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಈ ನೇತ್ರ ತಪಾಸಣಾ ಶಿಬಿರದಲ್ಲಿ ನೇತ್ರ ಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್, ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ಇವರ ನುರಿತ ವೈದ್ಯರ ತಂಡದವರಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗುವುದು. ಅಗತ್ಯವುಳ್ಳವರಿಗೆ ಸಂಘದ ವತಿಯಿಂದ ಉಚಿತ ಕನ್ನಡಕ ವಿತರಣೆಯನ್ನು ಮಾಡಲಾಗುವುದು.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ತಿಳಿಸಿರುತ್ತಾರೆ.


