Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ವಿರುದ್ಧದ ಆರೋಪ ಖಂಡನೀಯ — AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್

UllalaVaniBy UllalaVaniNovember 1, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ರವರ ವಿರುದ್ಧ ಶಾಸಕರಾದ ಭರತ್ ಶೆಟ್ಟಿಯವರು ಪತ್ರಿಕಾಗೋಷ್ಠಿಯಲ್ಲಿ ಮಾಡಿದ್ದ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ಸತ್ಯಕ್ಕೆ ದೂರವಾಗಿವೆ ಎಂದು ಅಖಿಲ ಭಾರತೀಯ ಕ್ರೈಸ್ತ ಒಕ್ಕೂಟ ಇದರ ಕರ್ನಾಟಕ ರಾಜ್ಯಾಧ್ಯಕ್ಷರಾದ ಆಲ್ವಿನ್ ಡಿಸೋಜ ಪಾನೀರ್ ಪತ್ರಿಕಾ ಹೇಳಿಕೆಯಲ್ಲಿ ಖಂಡಿಸಿದ್ದಾರೆ.

ಅವರು ನೀಡಿದ ಹೇಳಿಕೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಅತ್ಯಂತ ನಿಷ್ಕಳಂಕ ಹಾಗೂ ಜನಪರ ನಾಯಕರಲ್ಲಿ ಒಬ್ಬರಾಗಿರುವ ಸನ್ಮಾನ್ಯ ಯು.ಟಿ. ಖಾದರ್ ರವರು ಎಂದಿಗೂ ಲಂಚ ಸ್ವೀಕರಿಸಿದವರು ಅಲ್ಲ ಎಂದು ಹೇಳಿದರು. ಭರತ್ ಶೆಟ್ಟಿಯವರು ಮಾಡಿದ ಆರೋಪಗಳು ಅಸತ್ಯ ಹಾಗೂ ಜನರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ಎಂದು ಅವರು ಆರೋಪಿಸಿದರು.

ಖಾದರ್ ರವರ ವಿರುದ್ಧದ ಅಪವಾದವನ್ನು ಖಂಡಿಸುತ್ತಾ, ರಾಜಕೀಯ ಲಾಭಕ್ಕಾಗಿ ವ್ಯಕ್ತಿತ್ವ ಹಾನಿಗೆ ಯತ್ನಿಸುವಂತ ಹೇಳಿಕೆಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಆಲ್ವಿನ್ ಡಿಸೋಜರವರು ಒತ್ತಾಯಿಸಿದ್ದಾರೆ.

ಸ್ಪೀಕರ್ ಖಾದರ್ ರವರ ಬಗ್ಗೆ ಕಾಂಗ್ರೆಸ್‌ ಪಕ್ಷದ ವಿಶ್ವಾಸ:

ಕರ್ನಾಟಕ ರಾಜ್ಯದ ರಾಜಕೀಯ ವಲಯದಲ್ಲಿ ಸ್ಪೀಕರ್ ಯು.ಟಿ. ಖಾದರ್ ರವರ ನಿಷ್ಠೆ ಮತ್ತು ಪ್ರಾಮಾಣಿಕತೆ ಕುರಿತು ಪ್ರಶಂಸೆಯ ಧ್ವನಿ ಕೇಳಿಬರುತ್ತಿದೆ. ಸ್ಪೀಕರ್ ಖಾದರ್ ರವರು ಯಾವತ್ತೂ ಭ್ರಷ್ಟಾಚಾರ ಮಾಡಿಲ್ಲ ಎಂಬುದು ಕಾಂಗ್ರೆಸ್ ಪಕ್ಷದ ನಿಲುವಾಗಿದೆ. ಇದೇ ಕಾರಣಕ್ಕಾಗಿ ಕಾಂಗ್ರೆಸ್ ಸರ್ಕಾರವು ಅವರನ್ನು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ನೇಮಿಸಿದೆ. ಪಕ್ಷದ ಮೂಲಗಳು ಖಾದರ್ ರವರ ಸುದೀರ್ಘ ರಾಜಕೀಯ ಬದುಕು ನಿಷ್ಠೆಯ ಮಾದರಿಯಾಗಿದೆ ಎಂದು ತಿಳಿಸಿವೆ. ಅವರು ಸದಾ ಸಾರ್ವಜನಿಕ ಹಿತಾಸಕ್ತಿ ಕಾಪಾಡುವಲ್ಲಿ ಹಾಗೂ ವಿಧಾನಸಭೆಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಲ್ಲಿ ಮುಂಚೂಣಿಯಲ್ಲಿದ್ದಾರೆ.

ಸ್ಪೀಕರ್ ಖಾದರ್ ರವರು ಯಾವಾಗಲೂ ಸರ್ವರ ಸಮಬಾಳು ಶಾಂತಿಯ ವಾತಾವರಣವನ್ನು ಬಯಸುವವರು. ಅವರು ಧರ್ಮ, ಜಾತಿ ಅಥವಾ ಪಕ್ಷಭೇದದ ರಾಜಕೀಯದಿಂದ ದೂರವಿದ್ದು, ಎಲ್ಲರಿಗೂ ಸಮಾನ ಅವಕಾಶ ನೀಡುವ ಜನನಾಯಕನಾಗಿ ಗುರುತಿಸಿಕೊಂಡಿದ್ದಾರೆ. ವಿಧಾನಸಭೆಯ ಅಧಿವೇಶನಗಳಲ್ಲಿಯೂ ಅವರು ಎಲ್ಲಾ ಸದಸ್ಯರಿಗೆ ಗೌರವ ನೀಡುತ್ತಾ, ಸಂವಾದದ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರೋತ್ಸಾಹಿಸುತ್ತಾರೆ. ಅವರ ಶಾಂತ, ಸಮತೋಲನದ ನಡವಳಿಕೆ ಮತ್ತು ಎಲ್ಲರನ್ನು ಒಳಗೊಳ್ಳುವ ಮನೋಭಾವವು ರಾಜ್ಯ ರಾಜಕೀಯದಲ್ಲಿ ಸೌಹಾರ್ದತೆ ಹಾಗೂ ಸಹಕಾರದ ವಾತಾವರಣವನ್ನು ನಿರ್ಮಿಸಲು ನೆರವಾಗಿದೆ ಎಂದು ಆಲ್ವಿನ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡದ ಶಾಂತಿ ಕಾಪಾಡಲು ಖಾದರ್ ರವರ ದೃಢ ಕ್ರಮ:

ಕೋಮು ಸಂಘರ್ಷದಿಂದ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣವಾಗಿ ಜರ್ಜರಿತಗೊಂಡ ಸಂದರ್ಭದಲ್ಲಿ, ರಾಜ್ಯ ಸರ್ಕಾರವು ತಕ್ಷಣ ಕ್ರಮ ಕೈಗೊಂಡು, ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಖಡಕ್ ಅಧಿಕಾರಿಗಳನ್ನು ನೇಮಿಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದಲ್ಲಿ, ಅನುಭವ ಸಂಪನ್ನ ಹಾಗೂ ನಿಷ್ಠಾವಂತ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪೊಲೀಸ್ ಆಯುಕ್ತರನ್ನು ನೇಮಿಸಿ, ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಪುನಃ ಸ್ಥಾಪನೆಗೊಳಿಸಲಾಯಿತು. ಜಿಲ್ಲೆಯಲ್ಲಿ ಸಂಪೂರ್ಣ ಶಾಂತಿ ನೆಲೆಸಲು ಮುಖ್ಯಮಂತ್ರಿ ತೆಗೆದುಕೊಂಡ ಈ ನಿರ್ಣಯದಲ್ಲಿ ಖಾದರ್ ರವರೂ ಒತ್ತಡ ಹೇರಿದ್ದರು. ಈ ಕ್ರಮದಿಂದ ಖಾದರ್ ರವರ ಶಾಂತಿ ನಿರ್ವಹಣೆಯ ಬದ್ಧತೆ ಮತ್ತೊಮ್ಮೆ ಸ್ಪಷ್ಟವಾಯಿತು.

ಸ್ಪೀಕರ್ ಖಾದರ್ ರವರ ನಿಷ್ಠೆಯ ಮೇಲಿನ ವಿಶ್ವಾಸ:

ಈ ಸಮಯದಲ್ಲಿ ಸ್ಪೀಕರ್ ಯು.ಟಿ. ಖಾದರ್ ರವರ ನಿಷ್ಠೆ ಮತ್ತು ಪಕ್ಷನಿಷ್ಠೆಯೂ ಸ್ಪಷ್ಟವಾಗಿ ಕಾಣಿಸಿಕೊಂಡಿತು. ಒಂದು ವೇಳೆ ಖಾದರ್ ರವರು ಭ್ರಷ್ಟರಾಗಿದ್ದರೆ, ಇಂತಹ ಕಠಿಣ ಕ್ರಮಗಳನ್ನು ಅವರು ವಿರೋಧಿಸುತ್ತಿದ್ದರು. ಆದರೆ ಖಾದರ್ ರವರು ಯಾವುದೇ ವಿರೋಧ ವ್ಯಕ್ತಪಡಿಸದೆ, ಸರ್ಕಾರದ ಕ್ರಮಕ್ಕೆ ಸಂಪೂರ್ಣ ಬೆಂಬಲ ನೀಡಿದರು. ಅವರ ಈ ನಿಷ್ಠಾವಂತ ನಿಲುವು ಮತ್ತು ಶಾಂತಿ ಸ್ಥಾಪನೆಗೆ ನೀಡಿದ ಸಹಕಾರದಿಂದ ಅವರು ಪ್ರಾಮಾಣಿಕ ಮತ್ತು ಜನಹಿತ ಚಿಂತನೆಯ ನಾಯಕನಾಗಿ ಗುರುತಿಸಿಕೊಂಡಿದ್ದಾರೆ ಎಂದು ಆಲ್ವಿನ್ ಡಿಸೋಜ ಪಾನೀರ್ ಸ್ಪಷ್ಟಪಡಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

February 5, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
ಉಳ್ಳಾಲ

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

By UllalaVaniFebruary 5, 20260

ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆಗೊಳಿಸಿದ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರುಉಳ್ಳಾಲ: ಉಳ್ಳಾಲದ ಮಣ್ಣಿನಲ್ಲಿ ನಾವು ಖುಷಿಯಿಂದ, ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿರುವುದು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d