Site icon Ullalavani

ಕಾವ್ಯ ಶೆಟ್ಟಿ ಹೆಸರಿನಲ್ಲಿ ಫ್ರೆಂಡ್ ರಿಕ್ವೆಸ್ಟ್ ; 32.06 ಲಕ್ಷ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ..!!

ಮಂಗಳೂರು,ನ.04: ಆನ್ ಲೈನ್ ಟ್ರೇಡಿಂಗ್‌ನಲ್ಲಿ ಹೆಚ್ಚು ಲಾಭಾಂಶ ದೊರೆಯುವುದಾಗಿ ನಂಬಿಸಿ 32.06 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರು ಸೆ.9ರಂದು ಫೇಸ್ ಬುಕ್ ನೋಡುತ್ತಿರುವ ಸಂದರ್ಭದಲ್ಲಿ ಕಾವ್ಯ ಶೆಟ್ಟಿ ಹೆಸರಿನಲ್ಲಿ ಫ್ರೆಂಡ್ ರಿಕ್ವೆಸ್ಟ್ ಬಂದಿದೆ. ಅದನ್ನು ಎಕ್ಸೆಪ್ಟ್ ಮಾಡಿ ಅವರೊಂದಿಗೆ ಚಾಟ್ ಮಾಡಿದ್ದ ಆಕೆ ತಾನು ಮುಂಬಯಿನಲ್ಲಿ ಟ್ರೇಡಿಂಗ್ ಕೆಲಸ ಮಾಡಿಕೊಂಡಿದ್ದು, ಅದರಿಂದ ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Exit mobile version