Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡುಬಿದ್ರಿ : ಉಚಿತ ನೇತ್ರ ತಪಾಸಣಾ ಶಿಬಿರ

UllalaVaniBy UllalaVaniNovember 5, 2025No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಪಡುಬಿದ್ರಿ, ನ.5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡುಬಿದ್ರಿ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಪಡುಬಿದ್ರಿ ಘಟಕ ಹಾಗೂ ಲಯನ್ಸ್ ಕ್ಲಬ್ ಪಡುಬಿದ್ರ‍್ರಿ ಇವರ ಸಹಯೋಗದೊಂದಿಗೆ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇವರ ನುರಿತ ವೈದ್ಯರ ತಂಡದವರಿAದ ಉಚಿತ ನೇತ್ರ ತಪಾಸಣಾ ಶಿಬಿರವು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇಲ್ಲಿ ಜರುಗಿತು.

ಈ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷರು ಹಾಗೂ ಅಡ್ವೆ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಸುವರ್ಣರವರು ಉದ್ಘಾಟಿಸಿ, “ಉಭಯ ಜಿಲ್ಲೆಗಳಲ್ಲಿ 33ಕ್ಕೂ ಮಿಕ್ಕಿ ಶಾಖೆಗಳನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ, ಸಂಸ್ಥೆಯ ಲಾಭಾಂಶದ ಒಂದು ಪಾಲನ್ನು ಸಮಾಜದ ಅಶಕ್ತ ಬಡ ವರ್ಗದ ಜನರ ಏಳಿಗೆಗಾಗಿ ವಿನಿಯೋಗಿಸಿಕೊಂಡು ಬರುತ್ತಿದ್ದು, ಸಂಸ್ಥೆಯು ಸದಾ ಅಭಿವೃದ್ದಿ ಪಥದಲ್ಲಿ ಸಾಗಲಿ, ಸಾಮಾಜಿಕ ಸೇವೆ ನಿರಂತರವಾಗಿ ಮುಂದುವರಿಯಲಿ” ಎಂದು ಶುಭ ಹಾರೈಸಿದರು.

ಬಿಲ್ಲವ ಸಮಾಜ ಸೇವಾ ಸಂಘ (ರಿ) ಪಡುಬಿದ್ರಿ ಇದರ ಅಧ್ಯಕ್ಷರು ಹಾಗೂ ಪಡುಬಿದ್ರಿ ವ್ಯವಸಾಯಿಕ ಸೇವಾ ಸಹಕಾರಿ ಸಂಘ (ನಿ.) ಇದರ ಅಧ್ಯಕ್ಷರಾದ ಶ್ರೀ ವೈ ಸುಧೀರ್ ಕುಮಾರ್ ರವರು ಮಾತನಾಡಿ “ಸಹಕಾರಿ ಸಂಸ್ಥೆಗಳು ಕೇವಲ ಲಾಭದ ದೃಷ್ಟಿಯನ್ನು ಹೊಂದದೆ ಜೊತೆಗೆ ಜನರ ಆರೋಗ್ಯ ದೃಷ್ಟಿಯಿಂದ ಉಚಿತವಾಗಿ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದಲ್ಲಿ ಇಂತಹ ತಪಾಸಣೆ ಯನ್ನು ಆಯೋಜಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆಲಸ ಶ್ಲಾಘನೀಯ. ಇವರಿಗೆ ಗ್ರಾಮದ ಜನತೆಯ ಪರವಾಗಿ ಕೃತಜ್ಞತೆಗಳು. ಸಾಮಾಜಿಕ ಕಳಕಳಿಯನ್ನು ಹೊಂದಿರುವ ಅತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಸ್ಥೆ ಇನ್ನಷ್ಟು ಅಭಿವೃದ್ಧಿ ಹೊಂದಲಿ” ಎಂದು ಶುಭ ಹಾರೈಸಿದರು.

ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ಲಯನ್ ಪ್ರಗತ್ ಶೆಟ್ಟಿ ಯವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ತನ್ನ 92ನೇ ಆರೋಗ್ಯ ಶಿಬಿರವನ್ನು ಪಡುಬಿದ್ರಿ ಪರಿಸರದಲ್ಲಿ ನಡೆಸುತ್ತಿರುವ ಬಗ್ಗೆ ಸಂತಸ ವ್ಯಕ್ತ ಪಡಿಸಿ, ಮುಂದಕ್ಕೆ ನಡೆಯುವ ಯಾವುದೇ ಸಾಮಾಜಿಕ ಸೇವೆಗಳಲ್ಲಿ ತಾವು ಕೈಜೋಡಿಸುವುದಾಗಿ ಭರವಸೆಯನ್ನು ನೀಡಿದರು.

ಕಣ್ಣಂಗಾರು ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷರಾದ ಶೀನ ಪೂಜಾರಿ ಇವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಹಣಕಾಸು ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಜನಸಾಮಾನ್ಯರ ಆರೋಗ್ಯದ ಕಾಳಜಿ ವಹಿಸಿ ಎಲ್ಲಾ ಶಾಖೆಗಳಲ್ಲಿ ಉಚಿತ ಆರೋಗ್ಯ ಶಿಬಿರ ನಡೆಸುತ್ತಿರುವುದಕ್ಕೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರಿಗೆ ಅಭಿನಂದನೆಯನ್ನು ಸಲ್ಲಿಸಿದರು”.
ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇದರ ವೈದ್ಯರಾದ ಡಾ. ನಿರಂಜನ್ ರವರು ಮಾತನಾಡಿ “ಈ ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕನ್ನಡಕ್ಕ ವಿತರಣೆ ಹಾಗೂ ಕಣ್ಣಿನ ಪೊರೆಯ ಶಸ್ತçಚಿಕಿತ್ಸೆಯನ್ನು ಮಾಡಲಾಗುವುದು ಎಂದು ಸಾರ್ವಜನಿಕರಿಗೆ ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ವಿನಂತಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಸಂಘವು ಏರ್ಪಡಿಸುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ಸಹಕಾರವನ್ನು ನೀಡುತ್ತಾ ಬರುತ್ತಿದೆ. ಅದೇ ರೀತಿ ಇವತ್ತಿನ ಗುಣಮಟ್ಟದ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ನೇತ್ರ ಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಇದರ ಆಡಳಿತ ವರ್ಗ, ವೈದ್ಯರು , ಸಿಬ್ಬಂದಿ ವರ್ಗದವರಿಗೂ ಹಾಗೂ ಎಲ್ಲಾ ಸಂಸ್ಥೆಯ ಪದಾದಿಕಾರಿಗಳಿಗೂ ಕೃತಜ್ಞತೆಯನ್ನು ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮನಾಥ್ ಸನಿಲ್, ಶ್ರೀ ಗೋಪಾಲ್ ಎಮ್., ನೇತ್ರ ಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇಲ್ಲಿನ ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಮೋಹನ್ ಮತ್ತು ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಶಿಬಿರದಲ್ಲಿ ಸುಮಾರು 200ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ನೇತ್ರ ತಪಾಸಣೆ, ಉಚಿತ ಕನ್ನಡಕ ವಿತರಣೆಯನ್ನು ನಡೆಸಲಾಯಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿಯಾದ ಸೌಮ್ಯ ವಿಜಯ್ ರವರು ಸ್ವಾಗತಿಸಿ, ಶಾಖಾಧಿಕಾರಿ ಚೈತ್ರ ದಿನೇಶ್ ರವರು ಧನ್ಯವಾದವಿತ್ತರು. ಕಾರ್ಯಕ್ರಮದ ನಿರೂಪಣೆಯನ್ನು ಹಿರಿಯ ಶಾಖಾಧಿಕಾರಿಯಾದ ಸ್ವಾತಿ ಪ್ರದೀಪ್ ರವರು ನಿರ್ವಹಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ವಿಟ್ಲ: ಬಾಲಕನಿಗೆ ಲೈಂಗಿಕ ಕಿರುಕುಳ, ಬೆದರಿಕೆ ಪ್ರಕರಣ- ಆರೋಪಿ ಬಂಧನ

August 19, 2026

ತಿಪಟೂರು ಕ್ಷೇತ್ರದ ಮಾಜಿ ಶಾಸಕ ಮತ್ತು ರಾಜ್ಯದ ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026

ವಿಜಯ ಗೇಮ್ಸ್ ಟೀಮ್ ನ ನೂತನ ಅಧ್ಯಕ್ಷರಾಗಿ ಮಾರ್ವಿನ್ ಡೇವಿಸ್ ಅವಿರೋಧ ಆಯ್ಕೆ

August 18, 2026

Comments are closed.

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ವಿಟ್ಲ: ಬಾಲಕನಿಗೆ ಲೈಂಗಿಕ ಕಿರುಕುಳ, ಬೆದರಿಕೆ ಪ್ರಕರಣ- ಆರೋಪಿ ಬಂಧನ

By UllalaVaniAugust 19, 20260

ವಿಟ್ಲ, ಆ. 19 : ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದಡಿ ವಿಟ್ಲ ಪೊಲೀಸರು 53…

ತಿಪಟೂರು ಕ್ಷೇತ್ರದ ಮಾಜಿ ಶಾಸಕ ಮತ್ತು ರಾಜ್ಯದ ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026

ವಿಜಯ ಗೇಮ್ಸ್ ಟೀಮ್ ನ ನೂತನ ಅಧ್ಯಕ್ಷರಾಗಿ ಮಾರ್ವಿನ್ ಡೇವಿಸ್ ಅವಿರೋಧ ಆಯ್ಕೆ

August 18, 2026

ಹೆಸರಾಂತ ಶಾಮಿಯಾನ ಮಾಲೀಕ ಕೆ.ಎನ್.ಹೆಚ್. ಅಬ್ದುಲ್ ಖಾದರ್ ನಿಧನ

August 18, 2026
1 2 3 … 2,067 Next
Automatic YouTube Gallery

ಆ.28ರಂದು ದುರ್ಗಾಶ್ರೀ ಮಹಿಳಾ ಮಂಡಳಿ ಪಜೀರು ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

ದುರ್ಗಾಶ್ರೀ ಮಹಿಳಾ ಮಂಡಳಿ ಪಜೀರು ಇದರ ವತಿಯಿಂದ ;ಆ.28ರಂದು ಷಷ್ಠಮ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ

ಕುರ್ನಾಡು ಶ್ರೀಸೂರ್ಯನಾರಾಯಣ ಭಟ್ ಪೌರೋಹಿತ್ಯದಲ್ಲಿ ಪೂಜಾ ಕಾರ್ಯಕ್ರಮ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆ.28ರಂದು ದುರ್ಗಾಶ್ರೀ ಮಹಿಳಾ ಮಂಡಳಿ ಪಜೀರು ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ
Now Playing
ಆ.28ರಂದು ದುರ್ಗಾಶ್ರೀ ಮಹಿಳಾ ಮಂಡಳಿ ಪಜೀರು ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ
ದುರ್ಗಾಶ್ರೀ ಮಹಿಳಾ ಮಂಡಳಿ ಪಜೀರು ಇದರ ವತಿಯಿಂದ ;ಆ.28ರಂದು ಷಷ್ಠಮ ವರ್ಷದ ಶ್ರೀ ...
ದುರ್ಗಾಶ್ರೀ ಮಹಿಳಾ ಮಂಡಳಿ ಪಜೀರು ಇದರ ವತಿಯಿಂದ ;ಆ.28ರಂದು ಷಷ್ಠಮ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ

ಕುರ್ನಾಡು ಶ್ರೀಸೂರ್ಯನಾರಾಯಣ ಭಟ್ ಪೌರೋಹಿತ್ಯದಲ್ಲಿ ಪೂಜಾ ಕಾರ್ಯಕ್ರಮ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ವಿಶ್ವ ದಾಖಲೆ ನಿರ್ಮಿಸಲು ಮುಂದಾದ ಸಂಗೀತ ಬಾಲಚಂದ್ರ
Now Playing
ವಿಶ್ವ ದಾಖಲೆ ನಿರ್ಮಿಸಲು ಮುಂದಾದ ಸಂಗೀತ ಬಾಲಚಂದ್ರ
ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ಗೆ ಮುಂದಾದ ಸಂಗೀತ ಬಾಲಚಂದ್ರ ;25 ಗಂಟೆಗಳ ...
ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ಗೆ ಮುಂದಾದ ಸಂಗೀತ ಬಾಲಚಂದ್ರ ;25 ಗಂಟೆಗಳ ಕಾಲ ನಿರಂತರ ದಾಸರಪದ ಗಾಯನ

ಮಂಗಳೂರಿನಲ್ಲಿ ನಿರ್ದೇಶಕ ವಿಜಯಕುಮಾರ್ ಕೋಡಿಯಾಲ್‌ಬೈಲ್ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version