ಮಂಗಳೂರು, ನ.7; ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾಲೇಜುಗಳಲ್ಲಿ ಅವೈಜ್ಞಾನಿಕವಾಗಿ ಹೊರಡಿಸಿರುವ ಮತ್ತು ಹೊರಡಿಸುತ್ತಿರುವ ಆದೇಶಗಳನ್ನು ಹಿಂಪಡೆಯುವAತೆ ಜಿಲ್ಲಾಧಿಕಾರಿ ಮೂಲಕ ಶಿಕ್ಷಣ ಇಲಾಖೆಗೆ ದ.ಕ.ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಉಪನ್ಯಾಸಕರ ಸಂಘ ಮನವಿ ಮಾಡಿಕೊಂಡಿದೆ.
ಕರ್ನಾಟಕ ರಾಜ್ಯ ಶಾಲಾಶಿಕ್ಷಣ (ಪದವಿಪೂರ್ವ) ಕಾಲೇಜುಗಳ ಪ್ರಾಂಶುಪಾಲರ ಸಂಘ (ರಿ.) ಮತ್ತು ಕರ್ನಾಟಕ ರಾಜ್ಯ ಶಾಲಾಶಿಕ್ಷಣ (ಪದವಿಪೂರ್ವ) ಕಾಲೇಜುಗಳ ಉಪನ್ಯಾಸಕರ ಸಂಘ ಮನವಿ ಮಾಡಿರುವ ಪತ್ರದಲ್ಲಿ ಕೆಲ ವಿಚಾರಗಳನ್ನು ಉಲ್ಲೇಖಿಸಿದ್ದಾರೆ.
ಇತ್ತೀಚೆಗೆ ಶಾಲಾಶಿಕ್ಷಣ ಇಲಾಖೆ (ಪದವಿ ಪೂರ್ವ) ಕಾಲೇಜುಗಳಿಗೆ ಪೂರಕವಲ್ಲದ ಆದೇಶಗಳು ಬರುತ್ತಿರುವುದು ದೈನಂದಿನ ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರುಗಳು ಆತ್ಮಸ್ಥೆöÊರ್ಯವನ್ನು ಕುಗ್ಗಿಸುತ್ತಿದೆ. ಇದರ ಪರಿಣಾಮವಾಗಿ ಪದವಿ ಪೂರ್ವ ಕಾಲೇಜುಗಳ ಭವಿಷ್ಯ ಡೋಲಾಯನ ಸ್ಥಿತಿಗೆ ತಲುಪುತ್ತಿದೆ. ಪರೀಕ್ಷಾ ಮಂಡಳಿಯನ್ನು ಪದವಿಪೂರ್ವ ಇಲಾಖೆಯಿಂದ ಪ್ರತ್ಯೇಕಿಸಿದ ನಂತರ ದೇಶದಲ್ಲಿ ಮಾದರಿಯಾಗಿದ್ದ ಪದವಿ ಪೂರ್ವ ಶಿಕ್ಷಣ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇತ್ತೀಚೆಗೆ ಪದವಿಪೂರ್ವ ಶಿಕ್ಷಣಕ್ಕೆ ಸಂಬAಧವೇ ಇಲ್ಲದ ಡಿಐಇಟಿ ನ ಪ್ರಶಿಕ್ಷಣಾರ್ಥಿಗಳನ್ನು ಪದವಿ ಪೂರ್ವ ಕಾಲೇಜುಗಳ ಸ್ಥಿತಿಗತಿಗಳ ದತ್ತಾಂಶ ಕ್ರೊಢೀಕರಿಸುವ ನೆಪದಲ್ಲಿ ಕಾಲೇಜಗಳನ್ನು ಪರಿಶೀಲನೆಗೊಳಪಡಿಸಲು ಹೊರಟಿರುವುದು ಪದವಿಪೂರ್ವ ಶಿಕ್ಷಣದ ದುರಂತವೇ ಸರಿ ಎಂದಿದ್ದಾರೆ.
ದ.ಕ.ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಉಪನ್ಯಾಸಕರ ಸಂಘಗಳು ತಾವು ಜಿಲ್ಲಾಧಿಕಾರಿಗೆ ನೀಡಿರುವ ಪತ್ರದಲ್ಲಿ ತಮ್ಮ ಬೇಡಿಕೆಗಳನ್ನು ಉಲ್ಲೇಖಿಸಿದ್ದಾರ
1)ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಹಾಗೂ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಡಿಎಸ್‌ಇಆರ್‌ಟಿ ದಿನಾಂಕ; 18-10-2025 ಮತ್ತು 31-10-2025ರ ಜಂಟಿ ಸುತ್ತೋಲೆಯನ್ನು ಹಿಂಪಡೆಯಬೇಕು.
2)ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಸ್ತುತ ವೃಂಧ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಲು ಇಪಿ55 ಎಸ್‌ಹೆಚ್‌ಹೆಚ್ ಭಾಗ-1 ಮತ್ತು ಭಾಗ-2ರಲ್ಲಿ 9&10 ನೇ ತರಗತಿ ಮತ್ತು 11&12 ನೇ ತರಗತಿಗಳಿಗೆ ಬೋಧನೆ ಮಾಡುವ ಸಂಬAಧ ಕಡತವನ್ನು ಮಾನ್ಯ ಶಿಕ್ಷಣ ಸಚಿವರ ಅನುಮೋದನೆಗಾಗಿ ಸಲ್ಲಿಸಿದ್ದು, ಈ ಕಡತವನ್ನು ಮಾನ್ಯ ಸಚಿವರು ಮಾನ್ಯ ಮಾಡದೆ (ಪರಿಗಣಿಸದೆ) ತಿರಸ್ಕರಿಬೇಕು.
3).2024-25 ನೇ ಸಾಲಿನ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಹಾಗೂ ಸಂಭಾವನೆ ಬಾಕಿ ಇರುವ ರೂ 13.5 ಕೋಟಿ ಹಣವನ್ನು ಕೂಟಲೇ ಬಿಡುಗಡೆ ಮಾಡಿ ವಿತರಿಸಬೇಕು.
4)ಸರ್ಕಾರಿ/ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳು ಮತ್ತು ಪ್ರಾಂಶುಪಾಲರ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಬೇಕು.
S)ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕೇತರ ಮತ್ತು ಗ್ರೂಪ್ ಡಿ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಬೇಕು.
6)ಉಪನಿರ್ದೇಶಕರ ಕಚೇರಿಯನ್ನು ಬಲವರ್ಧನೆಗೊಳಿಸಲು ಇಬ್ಬರು ಹಿರಿಯ ಪ್ರಾಂಶುಪಾಲರನ್ನು ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ನಿಯೋಜಿಸಿ ಆ ಮುಖಾಂತರ ಇಲಾಖೆಯ ಪರೀಕ್ಷೆ ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ಉತ್ತೇಜಿಸಬೇಕು.
7)ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿರುವ ಪರೀಕ್ಷಾ ವಿಭಾಗವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಈ ಹಿಂದೆ ಇದ್ದಂತೆ ವರ್ಗಾಯಿಸಬೇಕು.
ಕ)ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಪರೀಕ್ಷೆ ಮತ್ತು ಶೈಕ್ಷಣಿಕ ಸುಧಾರಣೆಗಳನ್ನು ತರಲು ಅಕಾಡೆಮಿಕ್ ಕೌನ್ಸಿಲ್ ಸಮಿತಿಯನ್ನು ಉನ್ನತ ಶಿಕ್ಷಣ ಇಲಾಖೆಯಲ್ಲಿರುವಂತೆ ರಚಿಸಬೇಕು.
9)ಕೆಪಿಎಸ್ ಶಾಲೆಗಳ ಆಡಳಿತಾತ್ಮಕ ಮತ್ತು ಆರ್ಥಿಕ ಸಂಪೂರ್ಣ ಅಧಿಕಾರ ಜವಾಬ್ದಾರಿಯನ್ನು ಆ ಕಾಲೇಜಿನ ಪ್ರಾಂಶುಪಾಲರಿಗೆ ಆಆಔ ನೀಡಿ ನೀಡಬೇಕು.
10)ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಪ್ರಸ್ತುತ ಇರುವ ವಿದ್ಯಾರ್ಥಿ ಮತ್ತು ಉಪನ್ಯಾಸಕರ ಅನುಪಾತ 3201 (ಪ್ರತಿ ತರಗತಿಗೆ (80x 4:1) ಇರುವುದನ್ನು 180:1 (ಪ್ರತಿ ತರಗತಿಗೆ ಕನಿಷ್ಠ 20 ಗರಿಷ್ಠ (45×4 1) ಅನುಪಾತಕ್ಕೆ ಮಾರ್ಪಡಿಸುವುದು,
1)ಸರ್ಕಾರಿ ನೌಕರಿಗೆ ನೀಡುತ್ತಿರುವ ನಗದುರಹಿತ ಚಿಕಿತ್ಸೆಯನ್ನು ಅನುದಾನಿತ ಕಾಲೇಜಿನ ಉಪನ್ಯಾಸಕರಿಗೆ ಮತ್ತು ಬೋಧಕೇತರ ಕುಟುಂಬ ವರ್ಗಕ್ಕೆ ಅನ್ವಯವಾಗುವಂತೆ ವಿಸ್ತರಿಸುವುದು.
12)ದಿನಾಂಕ: 01/04/2006 ರ ನಂತರ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಿಗೆ ಆಯ್ಕೆಯಾಗಿರುವ ಉಪನ್ಯಾಸಕರಿಗೆ ನಿಶ್ಚಿತ ಪಿಂಚಣಿ ಯೋಜನೆ ಜಾರಿಗೊಳಿಸಬೇಕು.
ಸುಮಾರು 12 ಬೇಡಿಕೆಗಳನ್ನು ಶಿಕ್ಷಣ ಇಲಾಖೆಯ ಮುಂದಿಟ್ಟಿದ್ದು, ಇದಕ್ಕೆ ಶಿಕ್ಷಣ ಇಲಾಖೆ ಯಾವ ರೀತಿಯಾಗಿ ಸ್ಪಂದಿಸುತ್ತದೆ ಎಂಬುವುದನ್ನು ಕಾತುನೋಡಬೇಕಿದೆ.
