ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಲ್ಕಿ ಶಾಖೆಯ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಮುಲ್ಕಿ ಶಾಖೆಯಲ್ಲಿ ಜರುಗಿತು.

ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶೀನ ಪೂಜಾರಿ, ಎಚ್. ವಾಸು ಪೂಜಾರಿ, ಸರೋಜಿನಿ, ಕುಶಾಲ ಎಸ್. ಕುಕ್ಯಾನ್ ಹಾಗೂ ಪ್ರಕಾಶ್ ಸುವರ್ಣ ರವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.
ಸದಸ್ಯರಾದ ಶೀನ ಪೂಜಾರಿಯವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಮುಂದಾಳತ್ವದಲ್ಲಿ ನಿರಂತರವಾಗಿ ಲಾಭ ಗಳಿಸುತ್ತಾ ಬರುತ್ತಿದೆ. ಸತತವಾಗಿ ಸದಸ್ಯರಿಗೆ ಡಿವಿಡೆಂಟ್ ನೀಡುತ್ತಿದ್ದು, ಕಳೆದ ಆರ್ಥಿಕ ಸಾಲಿನಲ್ಲಿ ಗ್ರಾಹಕರಿಗೆ ಶೇ.15 ಡಿವಿಡೆಂಡ್ ನೀಡಿರುವುದು ಸಂಘದ ಆರ್ಥಿಕ ಪ್ರಗತಿಯ ಸಂಕೇತವಾಗಿದೆ. ಸಂಘವೂ ಇನ್ನೂ ಹೆಚ್ಚಿನ ಅಭಿವೃದ್ದಿಯನ್ನು ಹೊಂದಲಿ” ಎಂದು ಶುಭ ಹಾರೈಸಿದರು
ಸದಸ್ಯರಾದ ಹರಿಶ್ಚಂದ್ರ ಪಿ ಸಾಲ್ಯಾನ್ ಮಾತನಾಡಿ, “ಸಂಘವು ಪ್ರಾರಂಭಗೊ0ಡ ಅತೀ ಕಡಿಮೆ ಅವಧಿಯಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರವಲ್ಲದೆ ಹೊರಜಿಲ್ಲೆಯಲ್ಲೂ 33 ಶಾಖೆಗಳನ್ನು ತೆರೆದು ಪ್ರಗತಿ ಪಥದತ್ತ ಸಾಗುತ್ತಿದೆ” ಎಂದು ತಿಳಿಸಿದರು.
ಸಂಘದ ಸದಸ್ಯರಾದ ಸರೋಜಿನಿ ಅವರು ಮಾತನಾಡಿ “ಮುಲ್ಕಿ ಶಾಖೆಯು ಪ್ರಾರಂಭವಾದ ದಿನದಿಂದ ಇಂದಿನವರೆಗೂ ಉತ್ತಮ ರೀತಿಯಲ್ಲಿ ಗ್ರಾಹಕ ಸ್ನೇಹಿ ವ್ಯವಹಾರ ನಡೆಸುತ್ತಿದ್ದು, ಗ್ರಾಹಕರಿಗೆ ಶೀಘ್ರ ಗತಿಯ ಸೇವೆಯನ್ನು ನೀಡುತ್ತಿದೆ” ಎಂದು ಶ್ಲಾಘಿಸಿದರು.
ಸಂಘದ ಗ್ರಾಹಕರಾದ ಮಾಧವ ಸನಿಲ್, ಲ್ಯಾನ್ಸಿ ಡಿ ಅಲ್ಮೇಡಾ, ಶಶಿಕಲ ಎಸ್ ಅಮೀನ್, ರಾಜೇಶ್ ಕುಮಾರ್,ಜಯ ಸಿ ಪೂಜಾರಿ, ರವೀಶ್ ಕಾಮತ್, ಸತೀಶ್ ಕುಮಾರ್ ಮತ್ತಿತ್ತರರು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ, ಸಂಘದ ಮುಲ್ಕಿ ಶಾಖೆಯು 13ನೇ ವರ್ಷದ ಸಂಭ್ರಮದೊAದಿಗೆ ಮುನ್ನಡೆಯುತ್ತಿದೆ. ಈ ಪ್ರಯುಕ್ತ ಸದಸ್ಯ ಗ್ರಾಹಕರಿಗೆ ಚಿನ್ನಾಭರಣಗಳಿಗೆ ಅಧಿಕ ಮೌಲ್ಯದೊಂದಿಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲಗಳನ್ನು ನೀಡುತ್ತಿದ್ದೇವೆ ಹಾಗೂ ಸಂಘದ ಎಲ್ಲಾ ಶಾಖೆಯಲ್ಲಿ ಇ ಸ್ಟಾ÷್ಯಂಪ್ ಸೇವಾ ಸೌಲಭ್ಯವನ್ನು ಗ್ರಾಹಕರಿಗೆ ನೀಡುತ್ತಿದೆ. ಸಂಘವು ಕಳೆದ ಮಾರ್ಚ್ ವರ್ಷಾಂತ್ಯಕ್ಕೆ 182 ಕೋಟಿಗೂ ಮಿಕ್ಕಿ ಚಿನ್ನಾಭರಣ ಸಾಲವನ್ನು ನೀಡಿದೆ. ಈಗಾಗಲೇ ಸಂಘವು ಈ ಸಾಲಿನ ಅರ್ಧ ಆರ್ಥಿಕ ವರ್ಷದಲ್ಲಿ 153 ಕೋಟಿಗೂ ಮಿಕ್ಕಿ ಚಿನ್ನಾಭರಣ ಸಾಲವನ್ನು ವಿತರಿಸಿದ್ದು, ಚಿನ್ನಾಭರಣ ಸಾಲ ನೀಡುವಿಕೆಯಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸಿದೆ ಎಂದು ತಿಳಿಸಿದರು. ಚಿನ್ನಾಭರಣ ಸಾಲ ಎಲ್ಲರಿಗೂ ಅಗತ್ಯ ಇರುವಂತಹದು. ಅದರ ಸೌಲಭ್ಯವನ್ನು ಕೂಡ ನಾವು ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 0% ಸೇವಾ ಶುಲ್ಕದಲ್ಲಿ ನೀಡುತ್ತಿದ್ದೇವೆ. ಸಂಸ್ಥೆಯು ಕೇವಲ ಬ್ಯಾಂಕಿAಗ್ ಮಾತ್ರವಲ್ಲದೆ ಜೀವ ವಿಮೆ, ಆರೋಗ್ಯ ವಿಮೆ ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿರುತ್ತದೆ. ಸದಸ್ಯರ ಆರೋಗ್ಯದ ಕಾಳಜಿಯ ದೃಷ್ಟಿಯಿಂದ ಆರೋಗ್ಯ ಶಿಬಿರವನ್ನು ಸಹ ನಿರಂತರವಾಗಿ ನಮ್ಮ ಸಂಘ ಹಮ್ಮಿಕೊಂಡು ಬರುತ್ತಿದೆ. ಸಂಘದಲ್ಲಿ 2 ವರ್ಷಕ್ಕೂ ಅಧಿಕ ಸೇವೆ ಸಲ್ಲಿಸುತ್ತಿರುವ ಪಿಗ್ಮಿ ಸಂಗ್ರಾಹಕರಿಗೆ ಸಂಘದ ವತಿಯಿಂದ ಉಚಿತ ಆರೋಗ್ಯ ವಿಮೆಯ ಸೌಲಭ್ಯವನ್ನು ನೀಡಲಾಗುತ್ತಿದೆ. ಜೊತೆಗೆ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿ ಅವರನ್ನು ಪ್ರೋತ್ಸಾಹಿಸುತ್ತಾ ಬಂದಿದೆ. ಸಂಘದಲ್ಲಿ ಲಭ್ಯವಿರುವ ಪ್ರತಿಯೊಂದು ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಗೋಪಾಲ್ ಎಂ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ರವರು ಉಪಸ್ಥಿತರಿದ್ದರು.
ಶಾಖೆಯ ಸಿಬ್ಬಂದಿಯಾದ ವರುಣ್ ರಾಜ್ ಸ್ವಾಗತಿಸಿ, ಶ್ವೇತಾ ವಂದಿಸಿದರು. ಶಾಖಾಧಿಕಾರಿ ಭಾಗ್ಯಶ್ರೀ ರವರು ಕಾರ್ಯಕ್ರಮ ನಿರೂಪಿಸಿದರು.

