ಕುತ್ತಾರು;ತುಳುನಾಡಿನ ಕಾರಣೀಕ ಕ್ಷೇತ್ರಗಳಲ್ಲಿ ಒಂದಾದ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಬಳಿಕ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೊರಗಜ್ಜನ ಕ್ಷೇತ್ರಕ್ಕೆ ಬರಬೇಕು ಎಂದು ಅಂದುಕೊAಡಿದ್ದೆ. ಆದರೆ ಇಂದು ಕ್ಷೇತ್ರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದೆ ಎಂದರು.
ಇದೇ ಸಂದರ್ಭ ಬಿಹಾರ ಫಲಿತಾಂಶದ ಬಗ್ಗೆ ಮಾತನಾಡಿ, ಬಿಹಾರದ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿದ ಮತಗಳಿಂದ ಭಾರತೀಯ ಜನತಾ ಪಾರ್ಟಿ ಜಯಶಾಲಿಯಾಗಿದೆ. ಬಿಹಾರದ ಜನ ತಮ್ಮ ಅಮೂಲ್ಯವಾದ ಮತಗಳಿಂದ ಆಶೀರ್ವಾದ ಮಾಡಿದ್ದಾರೆ. ಇದರಿಂದ ರಾಹುಲ್ ಗಾಂಧಿ ಹಾಗೂ ತೇಜಸ್ವಿ ಯಾದವ್ ಅವರು, ಪ್ರಪಂಚದಾದ್ಯAತ ಬಿತ್ತರಿಸುತ್ತಿದ್ದ ಸುಳ್ಳಿಗೆ ದೊಡ್ಡಮಟ್ಟದ ಸೋಲಾಗಿದೆ ಎಂದು ಟಾಂಗ್ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಜಿಲ್ಲಾ ಮಹಿಳಾ ಮೋರ್ಛಾ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಪೂಜಾ ಪೈ, ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ಜಿ.ಪಂ ಮಾಜಿ ಸದಸ್ಯೆ ಧನಲಕ್ಷಿö್ಮÃ ಗಟ್ಟಿ, ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್, ಉಪಾಧ್ಯಕ್ಷೆ ಸುಮನ ಹರೀಶ್ ಶೆಟ್ಟಿ, ಕಾರ್ಯದರ್ಶಿ ಕಿಶೋರ್, ಕೋಶಾಧಿಕಾರಿ ಸುಮಲತಾ ಕೊಣಾಜೆ ಯುವಮೋರ್ಛಾ ಅಧ್ಯಕ್ಷ ಮುರಳೀಧರ್ ಕೊಣಾಜೆ, ಮಹಿಳಾ ಮೋರ್ಛಾ ಅಧ್ಯಕ್ಷೆ ಮಾಧವಿ ಉಳ್ಳಾಲ್, ಮಾಜಿ ಮಂಡಲ ಕರ‍್ಯದರ್ಶಿ ಹೇಮಂತ್ ಶೆಟ್ಟಿ ದೇರಳಕಟ್ಟೆ, ಮುನ್ನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸತೀಶ್, ಮಂಡಲ ಕಾರ್ಯದರ್ಶಿ ಸುರೇಖಾ, ರವಿಶಂಕರ್ ಸೋಮೇಶ್ವರ್, ಕಿಶೋರ್, ರಮೇಶ್ ಬೆದ್ರೋಳಿಕೆ, ಪುರುಷೋತ್ತಮ್ ಗಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
