ಬಿ.ಸಿ.ರೋಡ್;ಬಿ.ಸಿ.ರೋಡಿನ ಸರ್ಕಲ್‌ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು ಆರು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ಪೀಣ್ಯ ನಿವಾಸಿಗಳಾದ (64), ರಮ್ಯ (23) ಹಾಗೂ ನಂಜಮ್ಮ (75) ಸಾವನ್ನಪ್ಪಿದವರಾಗಿದ್ದಾರೆ. ಉಳಿದಂತೆ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಾಲಕ ಸುಬ್ರಹ್ಮಣ್ಯ ಹಾಗೂ ಕಿರಣ್ ಅವರು ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಬೆಂಗಳೂರಿನಿAದ ಇನ್ನೋವಾ ಕಾರಿನಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದವರು ಎಂದು ತಿಳಿದು ಬಂದಿದೆ.
ಇಂದು ಮುಂಜಾನೆ ಸುಮಾರು 4.40ರ ಸಮಯದಲ್ಲಿ ಬೆಂಗಳೂರಿನ ಕಡೆಯಿಂದ ಬರುತ್ತಿದ್ದ ಕಾರು ಬಿ.ಸಿ.ರೋಡಿನ ಎನ್.ಜಿ ಸರ್ಕಲ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊAಡಿದ್ದು, ಒರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಉಳಿದಂತೆ ಇಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
ಅವೈಜ್ಷಾನಿಕ ಮಾದರಿಯ ಸರ್ಕಲ್ ಅಪಘಾತಕ್ಕೆ ಕಾರಣ ಎಂಬ ಆರೋಪಗಳು ಸಾರ್ವಜನಿಕರ ವಲಯಗಳಲ್ಲಿ ಕೇಳಿಬಂದಿದ್ದು, ಬಿ.ಸಿ.ರೋಡು-ಅಡ್ಡಹೊಳೆ ರಾಷ್ಟಿçÃಯ ಹೆದ್ದಾರಿ ಕಾಮಗಾರಿ ವೇಳೆ ನಿರ್ಮಾಣವಾದ ನೂತನ ಸರ್ಕಲ್‌ಗೆ ಪ್ರಥಮ ಬಲಿಯಾಗಿದೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್‌ಐ ಸುತೇಶ್ ಹಾಗೂ ಬಂಟ್ವಾಳ ಟ್ರಾಫಿಕ್ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.