ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.


ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.




