Site icon Ullalavani

ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ದ.ಕ ಜಿಲ್ಲೆಯ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪ್ರದಾನ

ಮಂಗಳೂರು: ಭಾನುವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಂಘದ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್ ಪುರಸ್ಕಾರ ಸ್ವೀಕರಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷರಾದ ಜಿ.ಟಿ ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ, ಐವನ್ ಡಿಸೋಜ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌, ಉಡುಪಿ ಶಾಸಕ, ಮೀನು ಮಾರಾಟ ಮಹಾಮಂಡಳದ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ವಿಧಾನ ಪರಿಷತ್‌ ಸದಸ್ಯರಾದ ಐವನ್‌ ಡಿಸೋಜ, ಕಿಶೋರ್‌ ಕುಮಾರ್‌ ಬೊಟ್ಯಾಡಿ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್‌ ಹೆಗ್ಡೆ, ನಬಾರ್ಡ್‌ ಮುಖ್ಯ ಮಹಾಪ್ರಬಂಧಕ ಡಾ.ಸುರೇಂದ್ರ ಬಾಬು, ಸಹಕಾರ ಸಂಘಗಳ ನಿಬಂಧಕ ಟಿ.ಎಚ್‌.ಎಂ ಕುಮಾರ್‌, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷರಾದ ಶಶಿಕುಮಾರ್‌ ರೈ ಬಾಲ್ಯೊಟ್ಟು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾದ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ರಾಜಾರಾಮ ಭಟ್ ಮೊದಲಾದವರು ಉಪಸ್ಥಿತರಿದ್ದರು.

Exit mobile version