ಮಂಗಳೂರು: ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ಮುಂದಿನ 5 ದಿನಗಳೊಳಗಾಗಿ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ತಿಳಿಸಬೇಕು.
ಮತ್ತೆ ನಾಯಿಗಳ ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಅವಗಳನ್ನು ಸ್ಥಳಾಂತರಿಸುವ ವೆಚ್ಚವನ್ನು ಆಯಾ ಸಂಸ್ಥೆಯಿAದಲೇ ವಸೂಲಿ ಮಾಡಲಾಗುತ್ತದೆ. ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ಸಂಬAಧಿಸಿದವರ ವಿರುದ್ಧ ಕಾನೂನು ಕ್ರಮ ವಹಿಸಲಾಗುತ್ತದೆ ಎಂದು ಮಂಗಳೂರು ಮಹಾನಗರ-ಪಾಳಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.