ಬೆಂಗಳೂರು ;ಬೆಂಗಳೂರು ನಗರದ 57 ವರ್ಷದ ಮಹಿಳೆಯನ್ನು ಡಿಜಿಟಲ್ ಅರೆಸ್ಟ್' ಹೆಸರಿನಲ್ಲಿ ಬೆದರಿಸಿದ ಸೈಬರ್ ವಂಚಕರು 31.83 ಕೋಟಿ ಸುಲಿಗೆ ಮಾಡಿರುವ ಘಟನೆ ನಡೆದಿದೆ.

ಈವರೆಗೆ ರಾಜ್ಯದಲ್ಲಿ ವರದಿಯಾದ ಅತ್ಯಧಿಕ ಮೊತ್ತ ಕಳೆದುಕೊಂಡಡಿಜಿಟಲ್ ಅರೆಸ್ಟ್’ ಪ್ರಕರಣ ಇದಾಗಿದೆ. ಇಂದಿರಾನಗರ ನಿವಾಸಿಯಾಗಿರುವ ಸಂತ್ರಸ್ತೆ ನೀಡಿದ ದೂರು ಆಧರಿಸಿ ಪೂರ್ವ ಸೈಬರ್ ಕ್ರೆöÊಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. ಐ.ಟಿ.ಕ್ಷೇತ್ರದ ಹಿರಿಯ ಉದ್ಯೋಗಿಯಾಗಿರುವ ಸಂತ್ರಸ್ತೆಗೆ 2024ರ ಸೆಪ್ಟೆಂಬರ್ 15ರಮದು ಕರೆ ಮಾಡಿದ ವ್ಯಕ್ತಿ, ತಾನು ಡಿಎಚ್‌ಎಲ್ ಕೊರಿಯರ್ ಸರ್ವೀಸ್‌ನಿಂದ ಕರೆ ಮಾಡುತ್ತಿದ್ದೇನೆ ಎಂದು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

