ಬಂಟ್ವಾಳ; ಇಂಜಿನಿಯರಿ0ಗ್ ವಿದ್ಯಾರ್ಥಿನಿಯರು ಸಂಚರಿಸುತ್ತಿದ್ದ ಸ್ಕೂಟರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮತ್ತೋರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಕಾವಳಕಟ್ಟೆ ಸಮೀಪದ ಎನ್.ಸಿ.ರೋಡ್ ಬಳಿ ಸಂಭವಿಸಿದೆ.

ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ 21 ವರ್ಷದ ಅನನ್ಯ ಮೃತ ಪಟ್ಟ ವಿದ್ಯಾರ್ಥಿನಿಯಾಗಿದ್ದಾರೆ. ಗುರುವಾಯನಕೆರೆ ನಿವಾಸಿ ಪೃಥ್ವಿ ರಾವ್ ಎಂಬವರು ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿನಿಯನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಇವರಿಬ್ಬರೂ ಮಂಗಳೂರಿನ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿAಗ್ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇನ್ನು ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



